ಸಿಪೆಟ್ ಸಂಸ್ಥೆಯಲ್ಲಿ ಡಿಪ್ಲೋಮಾ ಪ್ರವೇಶ: ಅರ್ಜಿ ಆಹ್ವಾನ
ಉಡುಪಿ, ಜೂ.೨೮: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋ ಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ -ಸಿಪೆಟ್ ಸಂಸ್ಥೆ- ದಲ್ಲಿ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ-೩ ವರ್ಷ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ- ೩ ವರ್ಷ, ಪೋಸ್ಟ್ ಗ್ರಾಜುಯೇಟ್ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಪ್ರೋಸೆಸ್ಸಿಂಗ್ ಟೆಸ್ಟಿಂಗ್- ೨ ವರ್ಷದ ಕೋರ್ಸ್ಗಳ ಪ್ರವೇಶಕ್ಕೆ ಎಸೆಸೆಲ್ಸಿ, ಪಿಯುಸಿ(ವಿಜ್ಞಾನ), ಐಟಿಐ ಮತ್ತು ಬಿಎಸ್ಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಹಾಗೂ ಹಾಜರಾದವರು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಿಪೆಟ್ ಸಂಸ್ಥೆ ಮೈಸೂರು ದೂ.ಸಂಖ್ಯೆ: ೦೮೨೧-೨೫೧೦೬೧೮, ೯೪೮೦೨೫೩೦೨೪/ ೯೭೯೧೪೩೧೮೨೭ ಅಥವಾ ವೆಬ್ಸೈಟ್ -www.cipet.gov.in- ಅನ್ನು ಸಂಪರ್ಕಿಸಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story