ಗ್ರಾಪಂ ಉಪ ಚುನಾವಣೆ: ಮದ್ಯ ಮಾರಾಟ ನಿಷೇಧ
ಉಡುಪಿ: ಬ್ರಹ್ಮಾವರ ತಾಲೂಕಿನ ಹಾರಾಡಿ ಹಾಗೂ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯಲಿರುವ ಗ್ರಾಪಂ ಉಪಚುನಾವಣೆಯ ಸಂಬಂಧ, ಜುಲೈ 21ರ ಸಂಜೆ 5 ಗಂಟೆಯಿಂದ ಜುಲೈ 23ರ ಸಂಜೆ 5 ಗಂಟೆಯವರಿಗೆ ಆಯಾ ಗ್ರಾಪಂಗಳ ಕ್ಷೇತ್ರ ವ್ಯಾಪ್ತಿಯಲ್ಲಿ ಒಣದಿನ (ಡ್ರೈಡೇ) ಗಳೆಂದು ಘೋಷಿಸಿ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.
Next Story