Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜು.14ರಂದು ಹಾಜಿ ಮುಸ್ತಾಫ ಕೆಂಪಿ...

ಜು.14ರಂದು ಹಾಜಿ ಮುಸ್ತಾಫ ಕೆಂಪಿ ಸ್ಮರಣಾರ್ಥ ರಕ್ತದಾನ ಶಿಬಿರ, ಅನುಸ್ಮರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ12 July 2023 6:20 PM IST
share
ಜು.14ರಂದು ಹಾಜಿ ಮುಸ್ತಾಫ ಕೆಂಪಿ ಸ್ಮರಣಾರ್ಥ ರಕ್ತದಾನ ಶಿಬಿರ, ಅನುಸ್ಮರಣೆ ಕಾರ್ಯಕ್ರಮ

ಉಪ್ಪಿನಂಗಡಿ: ಇಲ್ಲಿನ ಮಾಲೀಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಹಾಜಿ ಮುಸ್ತಾಫ ಕೆಂಪಿಯವರ ಸ್ಮರಣಾರ್ಥ ಜು.14ರಂದು ಬೆಳಗ್ಗೆ ಬೃಹತ್ ರಕ್ತದಾನ ಶಿಬಿರ ಉಪ್ಪಿನಂಗಡಿಯ ಇಂಡಿಯನ್ ಸ್ಕೂಲ್‍ನಲ್ಲಿ ನಡೆಯಲಿದ್ದು, ಬಳಿಕ ಮಾಲೀಕುದ್ದೀನಾರ್ ಮಸೀದಿಯಲ್ಲಿ ಜುಮಾ ನಮಾಝಿನ ಬಳಿಕ ತಹಲೀಲ್ ಸಮರ್ಪಣೆ, ಅನುಸ್ಮರಣಾ ಕಾರ್ಯಕ್ರಮ ನಡೆಯಲಿದೆ ಎಂದು ಮಾಲೀಕುದ್ದೀನಾರ್ ಮಸೀದಿಯ ಉಪಾಧ್ಯಕ್ಷರಾದ ಹಾಜಿ ಎಚ್. ಯೂಸುಫ್ ತಿಳಿಸಿದರು.

ಮಸೀದಿಯ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಕ್ತದಾನ ಶಿಬಿರವನ್ನು ಬೆಳಗ್ಗೆ 9ಕ್ಕೆ ಮಾಲೀಕುದ್ದೀನಾರ್ ಜುಮಾ ಮಸೀದಿಯ ಖತೀಬರಾದ ಅಬ್ದುಸ್ಸಲಾಂ ಫೈಝಿ ನೆರವೇರಿಸಲಿದ್ದಾರೆ. ಮಧ್ಯಾಹ್ನ 1ಗಂಟೆಯ ತನಕ ರಕ್ತದಾನ ಶಿಬಿರ ನಡೆಯಲಿದ್ದು, ಸುಮಾರು 500 ಯುನಿಟ್‍ಗಳಷ್ಟು ರಕ್ತ ಸಂಗ್ರಹಿಸುವ ಗುರಿಯಿದೆ. ಶುಕ್ರವಾರದ ಜುಮಾ ನಮಾಝಿನ ಬಳಿಕ ತಹಲೀಲ್ ಸಮರ್ಪಣೆ, ಅನುಸ್ಮರಣಾ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಸೀದಿಯ ಉಪಾಧ್ಯಕ್ಷರಾದ ಹಾಜಿ ಎಚ್. ಯೂಸುಫ್ ವಹಿಸಲಿದ್ದಾರೆ. ಬೆಳ್ತಂಗಡಿ ದಾರುಸ್ಸಲಾಂನ ಪ್ರಾಂಶುಪಾಲರಾದ ಸೈಯ್ಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ದುವಾಶೀರ್ವಚನ ನೀಡಲಿದ್ದಾರೆ, ಮುಖ್ಯ ಅತಿಥಿಗಳಾಗಿ ಆತೂರು ಜುಮಾ ಮಸೀದಿಯ ಖತೀಬ್ ಸೈಯ್ಯದ್ ಜಿಫ್ರಿ ತಂಙಳ್, ಕರ್ವೇಲು ಜುಮಾ ಮಸೀದಿಯ ಖತೀಬ್ ಸೈಯ್ಯದ್ ಅನಾಸ್ ತಂಙಳ್, ಸಮಸ್ತ ಕೇಂದ್ರ ಮುಶಾವರದ ಸದಸ್ಯರಾದ ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ, ಉಸ್ಮಾನ್ ಫೈಝಿ ತೋಡಾರು, ಮಾಲೀಕುದ್ದೀನಾರ್ ಜುಮಾ ಮಸೀದಿಯ ಖತೀಬರಾದ ಅಬ್ದುಸ್ಸಲಾಂ ಫೈಝಿ, ದಾರಿಮೀಸ್ ಅಸೋಸಿಯೇಶನ್‍ನ ರಾಜ್ಯಾಧ್ಯಕ್ಷ ಎಸ್.ಬಿ. ದಾರಿಮಿ, ಮಾಡನ್ನೂರು ನೂರುಲ್ ಹುದಾ ಅಕಾಡಮಿಯ ಪ್ರಾಂಶುಪಾಲ ಹನೀಫ್ ಹುದವಿ ದೇಲಂಪಾಡಿ ವಹಿಸಲಿದ್ದಾರೆ. ಜುಮಾ ನಮಾಝಿನ ಬಳಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ತಿಳಿಸಿದರು.

ಮಾಲೀಕುದ್ದೀನಾರ್ ಜುಮಾ ಮಸೀದಿ ಉಪ್ಪಿನಂಗಡಿ, ನುಸ್ರತುಲ್ ಇಸ್ಲಾಂ ಕಮಿಟಿ ಉಪ್ಪಿನಂಗಡಿ, ಎಸ್ಕೆಎಸ್ಸೆಸ್ಸೆಫ್ ಉಪ್ಪಿನಂಗಡಿ ಕ್ಲಸ್ಟರ್, ಜಂಇಯ್ಯತುಲ್ ಮುಅಲ್ಲಿಮೀನ್ ಉಪ್ಪಿನಂಗಡಿ ರೇಂಜ್, ರೇಂಜ್ ಮದರಸಾ ಮ್ಯಾನೇಜ್ಮೆಂಟ್ ಕಮಿಟಿ, ಉಪ್ಪಿನಂಗಡಿ, ಉಬಾರ್ ಡೋನರ್ಸ್ ಹೆಲ್ಪ್ ಲೈನ್, ಯೂತ್ ಐಕಾನ್ ಚಾರಿಟೇಬಲ್ ಟ್ರಸ್ಟ್, ನೂರಾನಿಯಾ ಯಂಗ್ ಮೆನ್ಸ್ ಅಸೋಸಿಯೇಷನ್, ಕುದ್ಲೂರು, ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಕಡವಿನಬಾಗಿಲು, ಸುಲ್ತಾನ್ ಯೂಥ್ ಫೆಡರೇಶನ್ ಹಳೆಗೇಟು, ಸಬೀಲ್ರುಶಾದ್ ಯಂಗ್‍ಮೆನ್ಸ್ ಅಸೋಸಿಯೇಷನ್ ನಿನ್ನಿಕಲ್ಲು, ಶಂಶುಲ್ ಉಲೇಮಾ ಯಂಗ್ ಮೆನ್ಸ್ ಅಸೋಸಿಯೇಷನ್ ಪವಿತ್ರನಗರ, ಇತ್ತಿಫಾಕುಲ್ ಮುಸ್ಲಿಮೀನ್ ವೆಲ್ಫೇರ್ ಅಸೋಸಿಯೇಶನ್ ಪೆರಿಯಡ್ಕ, ವಿಖಾಯ ರಕ್ತದಾನಿ ಬಳಗ, ದ.ಕ. ಜಿಲ್ಲೆ ಮತ್ತು ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಸಾಲಿಡಾರಿಟಿ ಯೂತ್ ಮೂಮ್‍ಮೆಂಟ್ ಉಪ್ಪಿನಂಗಡಿ ಇವುಗಳ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಅವರು ವಿವರಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾಲೀಕುದ್ದೀನಾರ್ ಜುಮಾ ಮಸೀದಿಯ ಉಪಾಧ್ಯಕ್ಷ ಹಾರೂನ್ ರಶೀದ್ ಅಗ್ನಾಡಿ, ಪ್ರಧಾನ ಕಾರ್ಯದರ್ಶಿ ಶುಕೂರ್ ಹಾಜಿ ಶುಕ್ರಿಯಾ, ಜೊತೆ ಕಾರ್ಯದರ್ಶಿ ಅಬ್ದುರ್ರವೂಫ್ ಯು.ಟಿ., ಕೋಶಾಧಿಕಾರಿ ಮುಹಮ್ಮದ್ ಮುಸ್ತಾಫ, ಸದಸ್ಯರಾದ ಹಮೀದ್ ಕರಾವಳಿ, ಸಾಮಾಜಿಕ ಕಾರ್ಯಕರ್ತರಾದ ಇಸ್ಮಾಯೀಲ್ ತಂಙಳ್, ಶಬೀರ್ ಕೆಂಪಿ, ಇರ್ಷಾದ್ ಯು.ಟಿ., ಸಿದ್ದೀಕ್ ಕೆಂಪಿ, ತೌಸೀಫ್ ಯು.ಟಿ., ಮುಹಮ್ಮದ್ ಕೂಟೇಲು, ಆಚಿ ಇಬ್ರಾಹೀಂ ಕೆಂಪಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X