ಉಪ್ಪಿನಂಗಡಿ: ಮುಸ್ತಫಾ ಕೆಂಪಿ ನಿಧನ
ಉಪ್ಪಿನಂಗಡಿ: ಇಲ್ಲಿನ ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ (49) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು.
ಅವರು ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಸೇರಿದಂತೆ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ಉದ್ಯಮಿಯಾಗಿದ್ದರು.
ಮೃತರು ಪತ್ನಿ, ಐವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಇಂದು ರಾತ್ರಿ ಮೃತದೇಹ ಉಪ್ಪಿನಂಗಡಿಗೆ ತಲುಪಲಿದ್ದು, ನಾಳೆ ಬೆಳಗ್ಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story