ಆನ್ಲೈನ್ ವಂಚನೆ: ದೂರು ದಾಖಲು
ಮಂಗಳೂರು, ಜು.13: ಕೆನರಾ ಬ್ಯಾಂಕ್ ಖಾತೆಯ ಕೆವೈಸಿ ಅಪ್ಡೇಟ್ ಆಗಿಲ್ಲ. ಖಾತೆ ಸ್ಥಗಿತಗೊಳ್ಳಲಿದೆ ಎಂದು ಹೇಳಿ ಹಂತಹಂತವಾಗಿ 2,74,749 ರೂ.ವನ್ನು ವ್ಯಕ್ತಿಯೊಬ್ಬ ವಂಚಿಸಿದ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬ್ಯಾಂಕ್ ಅಧಿಕಾರಿ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ಕೆವೈಸಿ ಅಪ್ಡೇಟ್ ಮಾಡಬೇಕು ಎಂದು ಹೇಳಿ ಬಳಿಕ ಒಟಿಪಿಗಳನ್ನು ಪಡೆದು ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ 2,74,749ರೂ. ಪಡೆದು ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Next Story