Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೆರೆ ಸಂತ್ರಸ್ಥರಿಗೆ ತಕ್ಷಣದಲ್ಲಿ ರಕ್ಷಣೆ...

ನೆರೆ ಸಂತ್ರಸ್ಥರಿಗೆ ತಕ್ಷಣದಲ್ಲಿ ರಕ್ಷಣೆ ಒದಗಿಸಿ ಅಗತ್ಯ ನೆರವು ಕಲ್ಪಿಸಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ8 July 2023 10:07 PM IST
share
ನೆರೆ ಸಂತ್ರಸ್ಥರಿಗೆ ತಕ್ಷಣದಲ್ಲಿ ರಕ್ಷಣೆ ಒದಗಿಸಿ ಅಗತ್ಯ ನೆರವು ಕಲ್ಪಿಸಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ, ಜು.8: ನೆರೆಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ತಕ್ಷಣದಲ್ಲಿ ರಕ್ಷಣೆ ಕೊಡುವುದರ ಜೊತೆಗೆ ಆಶ್ರಯ ಒದಗಿಸಿ ದೈನಂದಿನ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ ನಂತರದಲ್ಲಿ ನೆರವು ಒದಗಿಸಿ. ಅವರಿಗೆ ಸಹಜ ಜೀವನ ನಡೆಸಲು ಅನುವು ಮಾಡಿಕೊಡಬೇಕೆಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿಎ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶನಿವಾರ ಸಂಜೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾದ ಹಾನಿಗಳ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಂತೆ ನಡೆದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕಳೆದ ಎರಡು ಮೂರು ತಿಂಗಳಿನಿಂದ ವಾಡಿಕೆ ಮಳೆಯು ಕುಂಠಿತವಾಗಿ, ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತು. ಆದರೆ ಕಳೆದ 10 ದಿನಗಳಲ್ಲಿ 650ಮಿ.ಮೀನಷ್ಟು ಮಳೆಯಾಗಿದೆ. ಆದರೆ ವಾಡಿಕೆಯಂತೆ ಈ ಅವಧಿಯಲ್ಲಿ 310 ಮಿ.ಮೀ. ಮಳೆಯಾಗಬೇಕಿತ್ತು. ಆದರೆ 10ಕ್ಕೂ ಅಧಿಕ ಗ್ರಾಮ ಪಂಚಾಯತ್ ನಲ್ಲಿ ಒಂದೇ ದಿನದಲ್ಲಿ 300 ಮಿ.ಮೀ.ಗೂ ಹೆಚ್ಚು ಮಳೆಯಾಗಿ ಹೆಚ್ಚಿನ ಕಡೆಗಳಲ್ಲಿ ನೆರೆ ಉಂಟಾಗಿವೆ. ಮಳೆಯಿಂದ ತೊಂದರೆಗೊಳಗಾದ ನೆರೆ ಸಂತ್ರಸ್ಥರಿಗೆ ತಕ್ಷಣದಲ್ಲಿಯೇ ಪರಿಹಾರ ಕಲ್ಪಿಸಬೇಕು. ಮುಂದಿನ ದಿನಗಳಲ್ಲಿಯೂ ಸಹ ಈ ರೀತಿ ನೆರೆ ಉಂಟಾಗುವ ಸಾಧ್ಯತೆಗಳಿದ್ದು ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಹೆಚ್ಚಿನ ಮಳೆಯಿಂದಾಗಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೇ ಕೃತಕ ನೆರೆಗಳು ನಗರ ಪ್ರದೇಶಗಳಲ್ಲಿ ಆಗುತ್ತಿವೆ. ತೋಡುಗಳಲ್ಲಿ ಸುವ್ಯವಸ್ಥಿತ ವಾಗಿ ನೀರು ಹರಿದು ಹೋಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಪ್ರತಿವರ್ಷವೂ ಕರಾವಳಿ ತೀರದಲ್ಲಿ ಕಡಲ ಕೊರೆತಗಳು ಉಂಟಾಗುತ್ತಿವೆ. ಇವುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ರೀತಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಕೇವಲ ಸಮುದ್ರಕ್ಕೆ ಕಲ್ಲು ಹಾಕಿದಾಕ್ಷಣ ಸಮಸ್ಯೆ ಪರಿಹಾರವಾಗುವುದಿಲ್ಲ. ವ್ಯಯಿಸಿದ ಹಣವೂ ವ್ಯರ್ಥವಾಗುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಿಂದ ವೈಜ್ಞಾನಿಕವಾಗಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಈ ಬಗ್ಗೆ ಅಧಿಕಾರಿಗಳು ಆಸಕ್ತಿಯನ್ನು ವಹಿಸುವುದರೊಂದಿಗೆ ಕಡಲ ಕೊರೆತ ತಡೆಗೆ 15 ದಿನಗಳ ಒಳಗೆ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸಿ, ಅನುದಾನ ಒದಗಿಸಲು ಸರಕಾರದ ಜೊತೆ ನಿರಂತರ ಸಂಪರ್ಕದೊಂದಿಗೆ ಅನುದಾನ ಕ್ರೂಡೀಕರಿಸಿ ಕಾಮಗಾರಿ ಕೈಗೊಳ್ಳಲು ಮುಂದಾಗಬೇಕು ಎಂದರು.

ಕರಾವಳಿ ಗ್ರಾಮೀಣ ಭಾಗಗಳಲ್ಲಿ ಕಾಲುಸಂಕವನ್ನೇ ಆಶ್ರಯಿಸಿ ಸಂಚರಿಸುವವರು ಆಕಸ್ಮಿಕವಾಗಿ ಬಿದ್ದು ಪ್ರಾಣ ಹಾನಿ ಉಂಟಾಗುತ್ತಿದೆ. ಇವುಗಳನ್ನು ತಪ್ಪಿಸಲು ಅಗತ್ಯವಿರುವ ಎಲ್ಲಾ ಕಡೆ ಕಾಲು ಸಂಕ ನಿರ್ಮಾಣಕ್ಕೆ ಜಿಲ್ಲೆಯಾದ್ಯಂತ ಸರ್ವೆ ಕಾರ್ಯಗಳನ್ನು ನಡೆಸಲು ಪಂಚಾಯತ್‌ರಾಜ್ ಇಲಾಖೆ, ಪಿಡಬ್ಲ್ಯೂಡಿ ಹಾಗೂ ಸಣ್ಣ ನೀರಾವರಿ ಇಲಾಖೆ ಮುಂದಾಗಬೇಕು ಎಂದು ಸೂಚನೆ ನೀಡಿದರು.

ವಾರಾಹಿ ಯೋಜನೆಯನ್ನು 1979ರಲ್ಲಿ ಪ್ರಾರಂಭಿಸಲಾಗಿತ್ತು. ಆದರೆ ಅಧಿಕೃತವಾಗಿ 2005ನೇ ಸಾಲಿನಿಂದ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. 18 ವರ್ಷ ಕಳೆದರೂ ಸಹ ಅದು ಪೂರ್ಣ ಪ್ರಮಾಣದಲ್ಲಿ ಕಾಮಗಾರಿ ಮುಗಿಸಲು ಸಾಧ್ಯವಾಗಿಲ್ಲ ಈ ಬಾರಿ ನಮ್ಮ ಸರ್ಕಾರದಲ್ಲಿ ಪೂರ್ಣಗೊಳಿಸಲು ಅಗತ್ಯ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

ಮಳೆಗಾಲದಲ್ಲಿ ಸಾಮಾನ್ಯವಾಗಿ ಸಾಂಕ್ರಾಮಿಕ ರೋಗಗಳ ಹರಡುವಿಕೆ ಹೆಚ್ಚಾಗಿರುತ್ತದೆ. ಇವುಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಯಾವುದೇ ರೋಗಗಳು ಹರಡದಂತೆ ಎಚ್ಚರವಹಿಸಬೇಕು ಎಂದರು.

ಹೆದ್ದಾರಿ ಸೇರಿದಂತೆ ಇತರೆ ಭಾಗಗಳಲ್ಲಿರುವ ಅಪಾಯಕಾರಿ ಮರಗಳನ್ನು ಗುರುತಿಸುವುದರೊಂದಿಗೆ ಅವುಗಳ ತೆರವು ಕಾರ್ಯಗಳನ್ನು ಶೀಘ್ರದಲ್ಲಿಯೇ ಕೈಗೊಂಡಾಗ ಮಾತ್ರ ಮುಂದಾಗುವ ಅಪಘಾತಗಳನ್ನು ತಪ್ಪಿಸಲು ಸಾಧ್ಯ. ಈ ಬಗ್ಗೆ ಅರಣ್ಯ ಇಲಾಖೆ, ಇತರೇ ಇಲಾಖೆಯೊಂದಿಗೆ ಸಮನ್ವಯ ದಿಂದ ತೆರವುಗೊಳಿಸಬೇಕು ಎಂದರು.

ಕಳೆದ ಸಾಲಿನಲ್ಲಿ ಮಳೆಯಿಂದ ಹಾನಿಯಾದ ರಸ್ತೆ, ಸೇತುವೆ, ಶಾಲೆಗಳು, ಅಂಗನವಾಡಿ ಸೇರಿದಂತೆ ಸರ್ಕಾರಿ ಕಟ್ಟಡಗಳ ಒಟ್ಟು 622 ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು 692.93 ಲಕ್ಷ ಹಣವನ್ನು ಬಿಡುಗಡೆ ಮಾಡಲಾಗಿದ್ದು ಕೆಲವು ಕಾಮಗಾರಿಗಳು ಅಪೂರ್ಣಗೊಂಡಿವೆ. ಇವುಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಅನಾಹುತಗಳು ಮತ್ತು ಅವುಗಳಿಗೆ ಕೈಗೊಂಡ ಪರಿಹಾರ ಕ್ರಮಗಳ ಬಗ್ಗೆ ಸವಿವರವಾಗಿ ಸಭೆಗೆ ತಿಳಿಸಿದರು.

ಸಭೆಯಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾ ಪಂಚಾಯತ್ ಸಿಇಓ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

5 ಗಂಟೆಯಲ್ಲೇ ವಿಧವಾ ವೇತನ ಮಂಜೂರು

ಜಿಲ್ಲಾ ಉಸ್ತುವಾರಿ ಸಚಿವರು ಇಂದು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಉಡುಪಿ ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಅರ್ಜಿ ಸ್ವೀಕಾರದ ಸಂದರ್ಭದಲ್ಲಿ ಇತ್ತೀಚೆಗೆ ತೆಕ್ಕಟ್ಟೆ ಉಳ್ತೂರು ಬಳಿ ಭಾರೀ ಮಳೆಯಿಂದ ರಸ್ತೆ ಕಾಣದೆ ಕೆರೆಗೆ ಬಿದ್ದು ಮರಣಹೊಂದಿದ ಉಳ್ತೂರು ಗ್ರಾಮದ ದಿನಕರ ಶೆಟ್ಟಿ ಅವರ ಪತ್ನಿ ಎಂ ಶೀಲಾ ಶೆಟ್ಟಿ ಅವರು ವಿಧವಾ ವೇತನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸಚಿವೆ ತಕ್ಷಣ ಪುರಸ್ಕರಿಸಿದರು.

ಸಚಿವೆ ಪಿಂಚಣಿ ನೀಡಲು ಸ್ಥಳದಲ್ಲೇ ತಹಶೀಲ್ದಾರ್‌ಗೆ ಸೂಚನೆ ನೀಡಿದ್ದು, ಅರ್ಜಿ ಸಲ್ಲಿಸಿದ 5 ಗಂಟೆಗಳ ಒಳಗಾಗಿ ಎಂ ಶೀಲಾ ಶೆಟ್ಟಿ ಅವರಿಗೆ ವಿಧವಾ ವೇತನ ಮಂಜೂರಾತಿ ಪತ್ರವನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಸಂಜೆ ವಿತರಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X