ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ
ಉಡುಪಿ, ಜು.17: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ, ಹಿರಿಯ ನಾಗರಿಕರ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ/ ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆ ರಾಜ್ಯ ಪ್ರಶಸ್ತಿ ನೀಡಲು ವೆಬ್ಸೈಟ್ - www.dwdsc.karnataka.gov.in-ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಹಿರಿಯ ನಾಗರಿಕರು ಈ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಸಲು ಆಗಸ್ಟ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಕಚೇರಿ, ತಳ ಅಂತಸ್ತು, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ :0820-2574810, 2574811 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story