ಉಡುಪಿ: ನಿಷೇಧಿತ ಪ್ಲಾಸ್ಟಿಕ್ ವಶ-ದಂಡ ವಸೂಲಿ
ಉಡುಪಿ, ಜು.15: ಉಡುಪಿ ನಗರಸಭೆಯ ವತಿಯಿಂದ ಜಿಲ್ಲೆಯ ವಿವಿಧೆಡೆ ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ, ಒಟ್ಟು 107.81 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶ ಪಡಿಸಿಕೊಂಡು ಒಟ್ಟು 47,500 ರೂ. ದಂಡ ವಸೂಲಿ ಮಾಡಲಾಗಿದೆ.
ಮಲ್ಪೆಯಲ್ಲಿ 41.87 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು 24,000 ರೂ., ಪರ್ಕಳದಲ್ಲಿ 29.44 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪ ಡಿಸಿಕೊಂಡು 10,500 ರೂ. ಹಾಗೂ ಶ್ರೀ ಕೃಷ್ಣ ಮಠದ ಬಳಿ ನಿಷೇದಿತ ಪ್ಲಾಸ್ಟಿಕ್ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ದಾಳಿ ನಡೆಸಿ 36.5 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು ರೂ. 12,500 ದಂಡ ವಿಧಿಸಲಾಗಿದೆ.
ದಾಳಿಯಲ್ಲಿ ನಗರಸಭೆಯ ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ಕಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನಿಟರಿ ಸೂಪರ್ ವೈಸರ್ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು.
ಸಾರ್ವಜನಿಕರು, ಉದ್ದಿಮೆದಾರರು, ವ್ಯಾಪಾರಿಗಳು ನಿಷೇಧಿತ ಪ್ಲಾಸ್ಟಿಕ್ ಗಳನ್ನು ಉಪಯೋಗಿಸುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಿ, ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.