ಕಾಸರಗೋಡು: 30 ಕಿಲೋ ಗಾಂಜಾ ಸಹಿತ ಆರೋಪಿ ಸೆರೆ
ಕಾಸರಗೋಡು: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 30 ಕಿಲೋ ಗಾಂಜಾ ಸಹಿತ ಓರ್ವ ನನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬೋವಿಕ್ಕಾನ ಪೊವ್ವಲ್ ನ ಬಾಸಿತ್ (35) ಬಂಧಿತ ಆರೋಪಿ. ಬುಧವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಕುನಿಯ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಪೆರಿಯ ಕಡೆಯಿಂದ ಬಂದ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದು, ಓರ್ವ ನನ್ನು ಬಂಧಿಸಲಾಯಿತು. ಪ್ಲಾಸ್ಟಿಕ್ ಕವರ್ ಗಳಲ್ಲಿ ತುಂಬಿಸಿ ಗಾಂಜಾ ವನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
Next Story