ಕಾಸರಗೋಡು: ವಸತಿ ನಿಲಯದ 19 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ಕಾಸರಗೋಡು : ಅಸ್ವಸ್ಥಗೊಂಡ ಕಾಞ೦ಗಾಡ್ ವಸತಿ ನಿಲಯದ 19 ವಿದ್ಯಾರ್ಥಿಗಳನ್ನು ನೀಲೇಶ್ವರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಗಲದಲ್ಲಿರುವ ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಸತತ ಕೆಮ್ಮು ಕಂಡುಬಂದುದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು , ಇಬ್ಬರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಭೇಟಿಯಾದ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಯೋಗ ಕ್ಷೇಮ ವಿಚಾರಿಸಿದರು. ಜಿಲ್ಲಾ ವೈದ್ಯಾಧಿಕಾರಿಗಳು ಈ ಸಂದರ್ಭ ಜೊತೆಗಿದ್ದರು.
Next Story