ಕಾಸರಗೋಡು | ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರು ಆರೋಪಿಗಳ ಬಂಧನ

ಕಾಸರಗೋಡು : ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದು, ಅರೋಪಿಗಳ ಬಳಿಯಿಂದ 74.8ಗ್ರಾಂ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ.
ಮೀಯಪದವು ಬೇರಿಕೆಯ ಸಯ್ಯಿದ್ ಆಫ್ರಿದ್ (25) ಮತ್ತು ಮುಹಮ್ಮದ್ ಸಮೀರ್ ( 24) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಮೀಂಜ ಕೊಳಬಯಲು ಸಮೀಪ ಸ್ಕೂಟರನ್ನು ತಡೆದು ತಪಾಸಣೆ ನಡೆಸಿದಾಗ ಮಾದಕ ವಸ್ತು ಸಾಗಾಟ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story