ಕಾಸರಗೋಡು: ಬೆಂಕಿ ಆಕಸ್ಮಿಕ; ಅಗ್ನಿಗಾಹುತಿಯಾದ ಐದು ಅಂಗಡಿಗಳು
ಕಾಸರಗೋಡು: ಬೆಂಕಿಯ ಕೆನ್ನಾಲಿಗೆಗೆ ಐದು ಅಂಗಡಿಗಳು ಹೊತ್ತಿ ಉರಿದ ಘಟನೆ ಶನಿವಾರ ತಡರಾತ್ರಿ ಪೆರ್ಲ ಬಳಿ ನಡೆದಿದೆ.
ಪೆರ್ಲ ಪೇಟೆಯಲ್ಲಿರುವ ಪೂಜಾ ಫ್ಯಾನ್ಸಿ , ಗೋಪಿನಾಥ್ ಪೈ ಕ್ಲೋತ್ ಸೆಂಟರ್, ಪತ್ರಿಕಾ ವಿತರಣಾ ಮಳಿಗೆ, ಪ್ರವೀಣ್ ಆಟೋ ಮೊಬೈಲ್, ಸಾದತ್ ಸ್ಟೋರ್, ಗೌತಮ್ ಕೋಲ್ಡ್ ಹೌಸ್ ಮೊದಲಾದವು ಸಂಪೂರ್ಣ ಅಗ್ನಿಗಾ ಯುತಿಯಾಗಿವೆ.
ರಾತ್ರಿ 12ಗಂಟೆ ಸುಮಾರಿಗೆ ಘಟನೆ ನಡೆದಿದ್ದು , ಉಪ್ಪಳ ಕಾಸರಗೋಡಿನಿಂದ ಆಗಮಿಸಿದ ಐದು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಲಾಗಿದೆ.
ಮೂರು ಗಂಟೆಗೂ ಅಧಿಕ ಸಮಯದ ಬಳಿಕ ಬೆಂಕಿಯನ್ನು ನಂದಿಸಲಾಯಿತು. ಶಾರ್ಟ್ ಸರ್ಕ್ಯೂಟ್ ಬೆಂಕಿ ಅನಾಹುತಕ್ಕೆ ಕಾರಣ ಎಂದು ಶಂಕಿಸಲಾಗಿದೆ.
Next Story