ಕಾಸರಗೋಡು: ಹೊಳೆಯಲ್ಲಿ ಮುಳುಗಿ ಓರ್ವ ಬಾಲಕ ಮೃತ್ಯು; ಇಬ್ಬರು ನಾಪತ್ತೆ
ಕಾಸರಗೋಡು: ಬೋವಿಕಾನ ಬಳಿಯ ಎರಿಂಜಿಪುಯ ಹೊಳೆಯಲ್ಲಿ ಸ್ನಾನಕ್ಕಿಳಿದ ಮೂರು ಮಂದಿ ಬಾಲಕರು ನೀರಿನಲ್ಲಿ ಮುಳುಗಿದ್ದು, ಓರ್ವನ ಮೃತದೇಹ ಪತ್ತೆಯಾಗಿದೆ. ಇಬ್ಬರು ನಾಪತ್ತೆಯಾಗಿದ್ದಾರೆ.
ಸ್ಥಳೀಯ ನಿವಾಸಿ ರಿಯಾಝ್ (16) ಎಂಬವರ ಮೃತದೇಹ ಪತ್ತೆಯಾಗಿದ್ದು, ಯಾಸಿನ್(13), ಸಮದ್ (13) ಎಂಬವರು ನಾಪತ್ತೆಯಾಗಿದ್ದಾರೆ.
ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರು ಹುಡುಕಾಟ ನಡೆಸುತ್ತಿದ್ದಾರೆ. ಮಧ್ಯಾಹ್ನ ಮೂವರು ಸ್ನಾನಕ್ಕಿಳಿದ ಸಂದರ್ಭ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story