ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತ್ಯು
ಸಾಂದರ್ಭಿಕ ಚಿತ್ರ (freepik)
ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಕುಂಬಳೆ ಯಲ್ಲಿ ಶನಿವಾರ ಸಂಜೆ ನಡೆದಿದೆ.
ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಸ್ ಮೃತಪಟ್ಟ ಮಗು.
ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದಾರೆ. ಬಳಿಕ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಯಿತು.
ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.
ಊರಿಗೆ ಬಂದಿದ್ದ ತಂದೆ ಅನ್ವರ್ ಒಂದು ವಾರದ ಹಿಂದೆಯಷ್ಟೇ ಗಲ್ಫ್ ಗೆ ತೆರಳಿದ್ದರು.ಸುದ್ದಿ ತಿಳಿದು ತಂದೆ ಊರಿಗೆ ಮರಳಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
Next Story