ಕಾರು ಬೆಂಕಿಗಾಹುತಿ : ಮಡಿಕೇರಿ ಬಳಿ ಘಟನೆ

ಮಡಿಕೇರಿ: ಕಾರೊಂದು ಬೆಂಕಿಗಾಹುತಿಯಾದ ಘಟನೆ ಮಡಿಕೇರಿಯ ಸಿಂಕೋನ ಸಮೀಪದ ಹೆದ್ದಾರಿಯಲ್ಲಿ ನಡೆದಿದೆ.
ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದವರು ತಕ್ಷಣ ಕೆಳಗಿಳಿದಿದ್ದಾರೆ. ನೋಡ ನೋಡುತ್ತಿದ್ದಂತೆ ಅಗ್ನಿ ಆವರಿಸಿ ಕಾರು ಸಂಪೂರ್ಣ ಭಸ್ಮವಾಗಿದೆ. ಕಾರಿನಲ್ಲಿ ಪುತ್ತೂರಿನ ಅಬ್ದುಲ್ಲ ಸೇರಿದಂತೆ ನಾಲ್ವರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಘಟನೆಯಿಂದ ಮಡಿಕೇರಿ- ಮೈಸೂರು ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story