ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ವಿಶ್ವಕ್ಕೆ ಮಾದರಿ : ಎಚ್. ಎ.ಹಂಸ ಕೊಟ್ಟಮುಡಿ
ಹೊದ್ದೂರು ಗ್ರಾಮ ಪಂಚಾಯಿತಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ ಆಚರಣೆ

ಮಡಿಕೇರಿ: ಡಾ.ಬಿ.ಆರ್ ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನವು ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ ಹಂಸ ಕೊಟ್ಟಮುಡಿ ಅಭಿಪ್ರಾಯಪಟ್ಟರು.
ಹೊದ್ದೂರು ಗ್ರಾಮ ಪಂಚಾಯಿತಿಯಲ್ಲಿ ಡಾ .ಬಿ.ಆರ್ ಅಂಬೇಡ್ಕರ್ ಅವರ 134ನೇ ಜಯಂತಿಯಲ್ಲಿ ಧ್ವಜಾರೋಹಣ ನೆರವೇರಿಸಿ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು, ರಚಿಸಿದ ಸಂವಿಧಾನದಲ್ಲಿ ಸರ್ವರಿಗೂ ಸಮಪಾಲು ಎಂಬುದನ್ನು ಸಾರಿದ್ದಾರೆ. ಭಾರತ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನದಲ್ಲಿ ಭಯುಮುಕ್ತವಾಗಿ ಬದುಕುವ ಹಕ್ಕನ್ನು ಕಲ್ಪಿಸಲಾಗಿದೆ ಎಂದ ಹಂಸ ಕೊಟ್ಟಮುಡಿ ಅವರು, ಅಂಬೇಡ್ಕರ್ ಅವರ ತತ್ವ-ಸಿದ್ದಾಂತವನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯ ಹಮೀದ್, ಮೊಣ್ಣಪ್ಪ, ವಕೀಲರಾದ ರಿಯಾಝ್, ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.
Next Story