ಹಿರಿಯ ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪರನ್ನು ಭೇಟಿಯಾದ ಗೃಹ ಸಚಿವರು
ಮಡಿಕೇರಿ ಮೇ 17 : ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹಿರಿಯ ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ ಅವರನ್ನು ಕುಶಾಲನಗರದ ನಿವಾಸದಲ್ಲಿ ಭೇಟಿಯಾದರು.
ಯೋಗಕ್ಷೇಮ ವಿಚಾರಿಸಿದ ಸಚಿವರು ಹಳೆಯ ನೆನಪುಗಳನ್ನು ಮೆಲುಕು ಹಾಕಿ, ಆರೋಗ್ಯ ಕಾಪಾಡಿಕೊಳ್ಳುವಂತೆ ಶುಭ ಹಾರೈಸಿ ಮರಳಿದರು.
ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಕಾಂಗ್ರೆಸ್ ಯುವ ಮುಖಂಡ ನಂದಿನೆರವಂಡ ಮಧು ಮತ್ತಿತರ ಪ್ರಮುಖರು ಹಾಜರಿದ್ದರು.
Next Story