ಮಡಿಕೇರಿ: ಕಾಫಿ ತೋಟದಲ್ಲಿ ಹುಲಿಯ ಮೃತದೇಹ ಪತ್ತೆ
ಮಡಿಕೇರಿ: ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಹೋಬಳಿಯ ಕೊಟ್ಟಗೇರಿ ಗ್ರಾಮದ ಕಾಫಿ ತೋಟವೊಂದರಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ.
ಅರಣ್ಯ ಅಧಿಕಾರಿಗಳು ಹುಲಿಯ ಮೃತದೇಹ ಪರಿಶೀಲಿಸಿದಾಗ ಬೇರೆ ಪ್ರಾಣಿಗಳೊಂದಿಗೆ ಕಾದಾಡಿರುವ ಗಾಯದ ಗುರುತುಗಳು ಕಂಡು ಬಂದಿದೆ. ಅಂದಾಜು 14 ವರ್ಷದ ಹುಲಿ ನಿತ್ರಾಣದಿಂದ ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ತೋಟದ ಮಾಲೀಕರು ಮಾಹಿತಿ ನೀಡಿದ ಹಿನ್ನೆಲೆ ತಿತಿಮತಿ ಎಸಿಎಫ್ ಗೋಪಾಲ್, ಪೊನ್ನಂಪೇಟೆ ಆರ್ ಎಫ್‍ಓ ಶಂಕರಪ್ಪ, ಡಿಆರ್ ಎಫ್‍ಓ ದಿವಾಕರ್, ತಿತಿಮತಿ ವಲಯದ ಡಿಆರ್ ಎಫ್‍ಓ ರವಿಕಿರಣ್, ಚೇತನ್, ಕಲ್ಲಳ್ಳ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಹುಲಿಯ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
Next Story