ಮಡಿಕೇರಿ | ವೃದ್ಧೆಯ ಸಂಶಯಾಸ್ಪದ ಸಾವು : ಸೊಸೆಗೆ ನ್ಯಾಯಾಂಗ ಬಂಧನ
ಮಡಿಕೇರಿ: ವೃದ್ಧೆಯೊಬ್ಬರು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಮಡಿಕೇರಿ ತಾಲ್ಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದ್ದು, ಕೊಲೆ ಆರೋಪದ ಹಿನ್ನೆಲೆಯಲ್ಲಿ ಸೊಸೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮರಗೋಡಿನ ನಿವಾಸಿ ಪೂವಮ್ಮ (73) ಮೃತ ವೃದ್ಧೆಯಾಗಿದ್ದು, ಸೊಸೆ ಬಿಂದು (26) ಬಂಧಿಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಇವರಿಬ್ಬರ ನಡುವೆ ಕಲಹ ಏರ್ಪಟ್ಟು ಸೊಸೆ ಹಲ್ಲೆ ನಡೆಸಿದ್ದಾರೆ. ಅತ್ತೆ ಮೃತಪಟ್ಟ ನಂತರ ಇದು ಸಹಜ ಸಾವೆಂದು ಬಿಂಬಿಸುವ ಯತ್ನವನ್ನು ಬಿಂದು ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆ ಮಡಿಕೇರಿ ಗ್ರಾಮಾಂತರ ಪೊಲೀಸರು ತನಿಖೆ ಕೈಗೊಂಡು ಆಕೆಯನ್ನು ವಶಕ್ಕೆ ಪಡೆದರು ಎಂದು ತಿಳಿದು ಬಂದಿದೆ.
Next Story