ಡಿವೈಎಸ್‌ಪಿ ಕಚೇರಿಗೆ ಮುತ್ತಿಗೆ ಯತ್ನ: ವಿಜಯೇಂದ್ರ ಸೇರಿ ಹಲವರು ಪೊಲೀಸ್ ವಶಕ್ಕೆ
ಪಕ್ಷದ ಕಾರ್ಯಕರ್ತ ವಿನಯ್ ಆತ್ಮಹತ್ಯೆ; ಕುಶಾಲನಗರದಲ್ಲಿ ಬಿಜೆಪಿ ಪ್ರತಿಭಟನೆ
ಕೊಡಗು : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಕೊಡಗು ಶಾಸಕರಿಬ್ಬರ ವಿರುದ್ದ ಎಫ್‌ಐಆರ್‌ಗೆ ಆಗ್ರಹಿಸಿ ಡಿವೈಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದ್ದಾರೆ.
ಕುಶಾಲನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಡಿವೈಎಸ್‌ಪಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದರು. ಇದರಿಂದ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆಯಿತು.
ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಸಂಸದ ಯದುವೀರ್, ಪ್ರತಾಪ್ ಸಿಂಹ, ಕೆ.ಜಿ ಬೋಪಯ್ಯ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದರು.
ಪ್ರತಿಭಟನಾ ಸ್ಥಳದಲ್ಲಿ 450 ಕ್ಕೂ ಅಧಿಕ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
Next Story