ಸಂಪಾಜೆ: ಕಾರು-ಟ್ಯಾಂಕರ್ ಮಧ್ಯೆ ಭೀಕರ ಅಪಘಾತ; ಪ್ರಯಾಣಿಕರು ಪಾರು
ಸುಳ್ಯ: ಕಾರು ಮತ್ತು ಟ್ಯಾಂಕರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರು ನುಚ್ಚು ನೂರಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ್ಯ ಪಾರಾದ ಘಟನೆ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ರವಿವಾರ ಬೆಳಿಗ್ಗೆ ಸಂಭವಿಸಿರುವ ಬಗ್ಗೆ ವರದಿಯಾಗಿದೆ.
ಮಡಿಕೇರಿ ಕಡೆಯಿಂದ ಬರುತ್ತಿದ್ದ ಸ್ವಿಪ್ಟ್ ಕಾರು ಮತ್ತು ಸುಳ್ಯ ಕಡೆಯಿಂದ ಬರುತ್ತಿದ್ದ ಟ್ಯಾಂಕರ್ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನ ಇಂಜಿನ್ ಕಾರಿನಿಂದ ಬೇರ್ಪಟ್ಟು ದೂರಕ್ಕೆ ಎಸೆಯಲ್ಪಟ್ಟಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಾಸರಗೋಡು ಮೂಲದ ಐದು ಮಂದಿ ಯುವಕರು ಪವಾಡ ಸದೃಶ್ಯ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
Next Story