ಕೋಲಾರ | ನಿಂದನಾತ್ಮಕ ಕಾರ್ಟೂನ್ ಪೋಸ್ಟ್ ಮಾಡಿದ ಆರೋಪ : ಇಬ್ಬರ ಬಂಧನ
ಸಾಂದರ್ಭಿಕ ಚಿತ್ರ
ಕೋಲಾರ : ತೆರಿಗೆ ಕಟ್ಟುವ ವಿಚಾರದಲ್ಲಿ ಮುಸ್ಲಿಮ್ ಸಮುದಾಯವನ್ನು ನಿಂದನಾತ್ಮಕವಾಗಿ ಚಿತ್ರಿಸಿದ್ದ ಕಾರ್ಟೂನ್ ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೋಲಾರದ ಕೆಜಿಎಫ್ನ ರಾಬರ್ಟ್ಸನ್ ಪೇಟೆ ಪೊಲೀಸ್ ಬಂಧಿಸಿದ್ದು, ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಾರ್ಟೂನ್ ಪೋಸ್ಟ್ ಹಂಚಿಕೊಂಡ ಆರೋಪಿಗಳನ್ನು ನವೀನ್ ಜೈನ್, ಚೇತನ್ ಎಂದು ಗುರುತಿಸಲಾಗಿದೆ. ಅಲ್ಲದೆ, ಆರೋಪಿಗಳಲ್ಲಿ ಓರ್ವ ಬಿಜೆಪಿ ಮುಖಂಡ ಎಂದು ಹೇಳಲಾಗಿದೆ.
‘ಹೆಚ್ಚು ಮಕ್ಕಳನ್ನು ಹೆರುವವರಿಗಾಗಿ ತೆರಿಗೆ ಕಟ್ಟಿರಿ’ ಎಂದು ಬಿಂಬಿಸುವ ರೀತಿಯ ಪೋಸ್ಟ್ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಮುಸ್ಲಿಮ್ ಮುಖಂಡರು ಪೊಲೀಸ್ ಠಾಣೆಗೆ ದೂರು ನೀಡಿದ್ದರು ಎಂದು ತಿಳಿದು ಬಂದಿದೆ. ಹಾಗೆಯೇ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ನಡೆಸಿದ್ದರು ಎಂದು ತಿಳಿದುಬಂದಿದೆ.
Next Story