ಕೋಲಾರ: ಬಿಜೆಪಿ ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ನಾಮಪತ್ರ ಸಲ್ಲಿಕೆ
ಕೋಲಾರ, ಏ.1: ಬಿಜೆಪಿ ಜೆಡಿಎಸ್ ಮೈತ್ರಿ ಕೂಟದ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಅವರು ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಕೋಲಾರ ಪರಿಶಿಷ್ಟ ಜಾತಿ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಚುನಾವಣೆ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ನಾಮಪತ್ರ ಸ್ವೀಕರಿಸಿದರು.
ಈ ಸಂದರ್ಭ ಮಲ್ಲೇಶ್ ಬಾಬು ಅವರ ತಾಯಿ ಮಂಗಮ್ಮ ಮುನಿಸ್ವಾಮಿ ಮತ್ತು ಕುಟುಂಬ ಸದಸ್ಯರು ಜೊತೆಗಿದ್ದರು.
Next Story