ಹೈಕಮಾಂಡ್ ನಿರ್ಧಾರಕ್ಕೆ ಬದ್ದವಾಗಿ ಕೆಲಸ ಮಾಡಲು ಸಿದ್ಧ: ಸಚಿವ ಮುನಿಯಪ್ಪ
ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರೇ ಆದರು ನಾವೆಲ್ಲಾ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಹೈಕಮಾಂಡ್ ಯಾವ ಅಭ್ಯರ್ಥಿಯನ್ನು ನೀಡಿದರೂ ನಾವುಕೆಲಸ ಮಾಡಲು ಬದ್ದರಾಗಿದ್ದೇವೆ ಎಂದು ಆಹಾರ ಸಚಿವ ಕೆಹೆಚ್. ಮುನಿಯಪ್ಪ ಅವರು ಹೇಳಿದ್ದಾರೆ.
ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ವಿಚಾರವಾಗಿ ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ನಾನು 7 ಬಾರಿ ಕೋಲಾರ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದು, ನಾನು ಒಂದು ಜಿಲ್ಲೆಗೆ ಸೀಮಿತವಾದ ನಾಯಕ ಅಲ್ಲ. ನಾನು ಈ ರಾಜ್ಯದಾದ್ಯಂತ ನನ್ನದೇ ಆದ ಕಾರ್ಯಕರ್ತರನ್ನು ಹೊಂದಿದ್ದೇನೆ ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಸಚಿವರಾದ ಡಾ.ಎಂಸಿ ಸುಧಾಕರ್,ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್ ಹಾಗೂ ಎಲ್ಲಾ ಶಾಸಕರು ನಾವು ಒಗ್ಗಟ್ಟಿ ನಿಂದ ಕೆಲಸ ಮಾಡಿ ಎರಡು ಕ್ಷೇತ್ರಗಳನ್ನು ಗೆಲ್ಲಸಿಕೊಂಡು ಬರುತ್ತೇವೆ ಎಂದು ನಾವು ಅಧ್ಯಕ್ಷರಾದ ಡಿಕೆ.ಶಿವಕುಮಾರ್, ಹಾಗೂ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾತು ಕೊಟ್ಟಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷವು ರಾಜ್ಯದ ಜನರಿಗೆ ನೀಡಿರುವ 5 ಗ್ಯಾರಂಟಿ ಯೋಜನೆಗಳ ಫಲವಾಗಿ ನಮಗೆ ಜನರು ಆಶೀರ್ವಾದ ಮಾಡುತ್ತಾರೆ ಎಂದರು.