ಭೂ ದಾಖಲೆಗಳ ಗಣಕೀಕರಣ ಕಾರ್ಯ ಸರಿಯಾಗಿ ಮಾಡಿ: ಶಿವರಾಜ್ ತಂಗಡಗಿ
ಶಿವರಾಜ್ ತಂಗಡಗಿ
ಕೊಪ್ಪಳ : ಜಿಲ್ಲೆಯಲ್ಲಿ ಭೂ ದಾಖಲೆಗಳ ಗಣಕೀಕರಣ ಕಾರ್ಯವನ್ನು ಸರಿಯಾಗಿ ಮಾಡಬೇಕು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್.ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬುಧವಾರ ಬೆಂಗಳೂರಿನ ತಮ್ಮ ಕಚೇರಿಯಿಂದ ಗೂಗಲ್ ಮೀಟ್ ಮೂಲಕ ಭೂ ಸುರಕ್ಷಾ ಯೋಜನೆಯಡಿ ಕೊಪ್ಪಳ ಜಿಲ್ಲೆಯ ಎಲ್ಲ ತಾಲೂಕಿನ ಭೂ ದಾಖಲೆಗಳ ಗಣಕೀಕರಣ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲ ತಾಲ್ಲಕಿನಲ್ಲಿ ಭೂ ದಾಖಲೆಗಳ ಗಣಕೀಕರಣ ಸರಿಯಾಗಿ ನಡೆಯಬೇಕು.
ವಿಶೇಷವಾಗಿ ನೀರಾವರಿ ಭಾಗದಲ್ಲಿ ಇವುಗಳ ಸಮಸ್ಯೆಗಳು ಹೆಚ್ಚಾಗಿ ಕಂಡು ಬರುತ್ತವೆ. ತಾಲೂಕು ಕಚೇರಿ, ಸರ್ವೆ ಮತ್ತು ನೊಂದಣಿ ಇಲಾಖೆಗಳ ಎಲ್ಲ ಭೂ ದಾಖಲೆಗಳ ಡಿಜಿಟಲೀಕರಣದಿಂದ ಹಳೆಯ ದಾಖಲಾತಿಗಳ ಸಂರಕ್ಷಣೆ ಮಾಡಲು ಅನುಕೂಲವಾಗುತ್ತದೆ. ಇದರಿಂದ ಹಳೆಯ ದಾಖಲೆಗಳ ಸಂರಕ್ಷಣೆ ಹಾಗೂ ಕಳುವಾಗಲು. ತಿದ್ದಲು ಅಸಾಧ್ಯ. ನೇರವಾಗಿ ಡಿಜಿಟಲ್ ಮಾಧ್ಯಮ ಮೂಲಕ ಭೂ ದಾಖಲೆ ಪಡೆದುಕೊಳ್ಳುವ ಸೌಲಭ್ಯ ಜನರಿಗೆ ಇರಲಿದೆ.
ಅಡೆ ತಡೆಗಳನ್ನು ಆಲಿಸಿ, ತ್ವರಿತ ಆಡಳಿತ ಸೇವೆಯನ್ನು ಜನರಿಗೆ ಒದಗಿಸುವುದು ಇದರ ಉದ್ದೇಶವಾಗಿದೆ. ಕೊಪ್ಪಳ ಕಾರಟಗಿಯಲ್ಲಿ ಮೊದಲಿಗೆ ಪಾಯಲೇಟ ಬೇಸ ಮಾಡಿರುವುದು ಯಶಸ್ವಿಯಾಗಿದೆ ಅಲ್ಲಿ ಚೆನ್ನಾಗಿ ಮಾಡುತ್ತಿದ್ದಾರೆ. ಅದರಂತೆ ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಈ ಕೆಲಸ ನಡೆಯಬೇಕು. ತಹಸಿಲ್ದಾರ್ ಕಚೇರಿಯಿಂದ ಭೂ ದಾಖಲೆಗಳ ಗಣಕೀಕರಣಕ್ಕೆ ಹೆಬೆಟ್ಟು ನೀಡಿದ ನಂತರ ಜಿಲ್ಲಾಧಿಕಾರಿ ನಳಿನ್ ಅತುಲ್ ಅವರು ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಭೂ ದಾಖಲೆಗಳ ಗಣಕೀಕರಣ ನಡೆಯುತ್ತಿದೆ.
ಆನ್ಲೈನ್ ಮೂಲಕ ಭೂ ದಾಖಲೆಗಳ ಡಿಜಿಟಲೀಕರಣ ಮಾಡಲಾಗುತ್ತಿದೆ. ಭೂ ದಾಖಲೆಗಳ ಗಣಕೀಕರಣಕ್ಕೆ ಸಮಸ್ಯೆಯಾಗದಂತೆ ಪ್ರತಿ ತಾಲೂಕಿನಲ್ಲಿ 6 ಜನ ಆಪರೇಟರ್ ಹಾಗೂ ಗಣಕೀಕರಣಕ್ಕೆ ಬೇಕಾಗುವ ಎಲ್ಲ ಉಪಕರಣಗಳನ್ನು ನೀಡಲಾಗಿದೆ. ಈ ಕಾರ್ಯ ರಾಜ್ಯದ ಎಲ್ಲ ಕಡೆಯು ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.
ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ, ಕೊಪ್ಪಳ ತಹಶೀಲ್ದಾರ್ ವಿಠಲ ಚೌಗಲಾಯ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.