ಕನಕಗಿರಿ | ರಸ್ತೆಯಲ್ಲೇ ಹೊತ್ತಿ ಉರಿದ ಕಾರು ; ಮೂವರು ಅಪಾಯದಿಂದ ಪಾರು

ಕನಕಗಿರಿ : ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಇಲ್ಲಿನ ವಾಲ್ಮೀಕಿ ವೃತ್ತದಲ್ಲಿ ಸೋಮವಾರ ಸಂಜೆ ನಡೆದಿದೆ.
ಕಾರಿನಲ್ಲಿ ಮೂವರು ಮಂದಿ ಪ್ರಯಾಣಿಸುತ್ತಿದ್ದರು. ಬೆಂಕಿ ಕಾಣಿಸಿಕೊಂಡಿದ್ದರಿಂದ ತಕ್ಷಣ ಮೂವರು ಕಾರಿನಿಂದ ಕೆಳಗಿಲಿದಿದ್ದಾರೆ ಎಂದು ತಿಳಿದು ಬಂದಿದೆ.
ಕಾರಿನ ಇಂಜಿಯನ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ನವಲಿ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ.
Next Story