Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ದೊಡ್ಡ ಪ್ರಮಾಣದಲ್ಲಿನ...

ಕೊಪ್ಪಳ | ದೊಡ್ಡ ಪ್ರಮಾಣದಲ್ಲಿನ ಪತ್ರಿಕೋದ್ಯಮದಿಂದ ಸಣ್ಣ ಬದಲಾವಣೆ ಸಾಧ್ಯವಾಗುತ್ತಿಲ್ಲ : ಪ್ರಭಾಕರ್

ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ9 March 2025 5:50 PM IST
share
ಕೊಪ್ಪಳ | ದೊಡ್ಡ ಪ್ರಮಾಣದಲ್ಲಿನ ಪತ್ರಿಕೋದ್ಯಮದಿಂದ ಸಣ್ಣ ಬದಲಾವಣೆ ಸಾಧ್ಯವಾಗುತ್ತಿಲ್ಲ : ಪ್ರಭಾಕರ್

ಕೊಪ್ಪಳ : ‘ಪತ್ರಿಕೋದ್ಯಮ ಸಣ್ಣ ಪ್ರಮಾಣದಲ್ಲಿದ್ದಾಗ ಸಮಾಜದಲ್ಲಿ ದೊಡ್ಡ ದೊಡ್ಡ ಬದಲಾವಣೆಗಳಾಗಿವೆ. ಇಂದು ಇಷ್ಟು ದೊಡ್ಡ ಪ್ರಮಾಣದಲ್ಲಿರುವ ಪತ್ರಿಕೋದ್ಯಮದಿಂದ ಸಣ್ಣ ಬದಲಾವಣೆಯೂ ಸಾಧ್ಯವಾಗುತ್ತಿಲ್ಲ ಎಂದು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡಾ.ಅಂಬೇಡ್ಕರ್, ಡಿವಿಜಿ, ಪಾಟೀಲ್ ಪುಟಪ್ಪ ಸೇರಿ ಒಟ್ಟು 24 ಮಹನೀಯರ ಹೆಸರಿನಲ್ಲಿ ಇಂದು ದತ್ತಿನಿಧಿ ಪ್ರಶಸ್ತಿಗಳನ್ನು ಕೊಡಲಾಗುತ್ತಿದೆ. ಈ ಎಲ್ಲ ಮಹನೀಯರ ಕಾಲದಲ್ಲಿ ಪತ್ರಿಕೋದ್ಯಮ ಸಣ್ಣ ಪ್ರಮಾಣದಲ್ಲಿತ್ತು. ಆದರೂ, ಆ ಹೊತ್ತು ದೊಡ್ಡ ದೊಡ್ಡ ಬದಲಾವಣೆಗಳಿಗೆ ಕಾರಣವಾಗಿತ್ತು ಎಂದು ಸ್ಮರಿಸಿದರು.

ಇದೀಗ ಈ ಮಹನೀಯರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿಗಳನ್ನು ಸ್ವೀಕರಿಸುತ್ತಿರುವ ಈ ಹೊತ್ತಿನಲ್ಲಿ ಪತ್ರಿಕೋದ್ಯಮ ದೊಡ್ಡದಾಗಿ ಬೆಳೆದಿದೆ. ಆದರೆ, ಸಣ್ಣ ಪ್ರಮಾಣದ ಬದಲಾವಣೆ ಸಾಧ್ಯವಾಗುತ್ತಿಲ್ಲ. ಇದು ಬೇಸರದ ಸಂಗತಿ. ಈ ಮಹನೀಯರ ಹೆಸರುಗಳು ಕೇವಲ ದತ್ತಿನಿಧಿಗೆ ಮಾತ್ರ ಸೀಮಿತವಾಗಿ ಇವರ ನಿಷ್ಠುರ ವೃತ್ತಿಪರತೆ, ರಾಜಿ ರಹಿತ ಕಾಳಜಿಗಳು, ಮೌಲ್ಯಗಳು ನಾಪತ್ತೆಯಾಗಿರುವುದೂ ಬೇಸರ ತರಿಸುವುದಿಲ್ಲವೇ? ಎಂದು ಅವರು ಪ್ರಶ್ನಿಸಿದರು.

ಹಿಂದೆಲ್ಲಾ ಪತ್ರಕರ್ತರು ರಾಜಕಾರಣಿಗಳನ್ನು ನಿಷ್ಠುರವಾಗಿ, ಜವಾಬ್ದಾರಿಯುತವಾಗಿ ಪ್ರಶ್ನಿಸುತ್ತಿದ್ದರು. ಇದರ ಪರಿಣಾಮ ರಾಜಕಾರಣಿಗಳು ಜವಾಬ್ದಾರಿಯುತವಾಗಿ ವರ್ತಿಸುತ್ತಿದ್ದರು. ಆದರೆ, ಈಗ ರಾಜಕಾರಣಿಗಳು, ಪತ್ರಕರ್ತರ ಜವಾಬ್ದಾರಿಗಳನ್ನು ಪ್ರಶ್ನಿಸುವ ಸ್ಥಿತಿ ಬಂದಿದೆ. ಏಕೆಂದರೆ, ಇಂದಿನ ಮಾಧ್ಯಮ ಕ್ಷೇತ್ರಕ್ಕೆ ಜವಾಬ್ದಾರಿಯುತ ಪತ್ರಿಕೋದ್ಯಮವೇ ಮರೆತು ಹೋದಂತಿದೆ. ರಾಜಕಾರಣಿಗಳು, ಸಾಮಾಜಿಕ ಹೋರಾಟಗಾರರು ಪತ್ರಕರ್ತರು ಪತ್ರಿಕೋದ್ಯಮವನ್ನೇ ಆರೋಪಿ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂಕೋರ್ಟ್‍ಗಳೂ ಪ್ರತೀ ತಿಂಗಳು ಒಂದಲ್ಲಾ ಒಂದು ಪ್ರಕರಣದಲ್ಲಿ ಪತ್ರಿಕೋದ್ಯಮಕ್ಕೆ ಚಾಟಿ ಬೀಸುತ್ತಲೇ ಇದ್ದಾರೆ. ಇವೆಲ್ಲಾ ಏನನ್ನು ಸೂಚಿಸುತ್ತಿದೆ ಎಂದು ಅವರು ಕೇಳಿದರು.

ಅವರು ಹೀಗಂದ್ರು, ನೀವೇನು ಹೇಳ್ತೀರ..ಎನ್ನುವ ‘Easy chair journalism’ನಿಂದ ಪತ್ರಕರ್ತರು ಹೊರಗೆ ಬರದಿದ್ದರೆ ಯಾರ ಹೆಸರಿನಲ್ಲಿ ದತ್ತಿನಿಧಿ ಕೊಡಲಾಗುತ್ತಿದೆಯೋ ಅವರ ಮೌಲ್ಯಗಳು ಉಳಿಯಲು ಸಾಧ್ಯವಿಲ್ಲ. ಸ್ವಾತಂತ್ರ್ಯ ಪೂರ್ವದಲ್ಲಿ ಅಭಿವೃದ್ಧಿ ಪತ್ರಿಕೋದ್ಯಮ ಆರೋಗ್ಯಕರವಾಗಿತ್ತು. ಆದರೆ, ಇಂದು ಕೇವಲ ಹೇಳಿಕೆ ಆಧಾರಿತ ವೃತ್ತಿ ಮಾತ್ರ ವಿಜೃಂಭಿಸುತ್ತಿದೆ. ಅಧ್ಯಯನಶೀಲತೆ ಕಡಿಮೆ ಆಗುತ್ತಿರುವುದು ಇದಕ್ಕೆ ಕಾರಣ ಎಂದು ಅವರು ನುಡಿದರು.

ಪತ್ರಕರ್ತರ ಸಂಘದ ಶಿವಾನಂದ ತಗಡೂರು ಕ್ರಿಯಾಶೀಲರು. ಇದುವರೆಗೂ ನನ್ನ ಕೈಯಲ್ಲೇ ಸಾವಿರಕ್ಕೂ ಅಧಿಕ ಮಂದಿಗೆ ಪ್ರಶಸ್ತಿಗಳನ್ನು ಕೊಡಿಸಿದ್ದಾರೆ. ಪತ್ರಿಕಾ ವೃತ್ತಿಯಲ್ಲಿರುವ ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಪ್ರಶಸ್ತಿ ಕೊಡಿಸುವ ಮಹತ್ವಾಕಾಂಕ್ಷೆ ಇಟ್ಟುಕೊಂಡಿದ್ದಾರೆ. ಪ್ರಶಸ್ತಿ ಪುರಸ್ಕೃತರು ವೃತ್ತಿ ಘನತೆಯನ್ನು ಎತ್ತಿ ಹಿಡಿಯುವ ದಿಕ್ಕಿನಲ್ಲಿ ಮತ್ತಷ್ಟು ಕ್ರಿಯಾಶೀಲರಾಗುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಹೇಳಿದರು.

ಸಚಿವ ಶಿವರಾಜ ತಂಗಡಗಿ, ಶಾಸಕ ರಾಘವೇಂದ್ರ ಹಿಟ್ನಾಳ್, ಕೊಪ್ಪಳ ವಿವಿ ಕುಲಪತಿ ಪ್ರೊ.ಬಿ.ಕೆ.ರವಿ, ಹಿರಿಯ ಪತ್ರಕರ್ತ ಜಿ.ಎನ್.ಮೋಹನ್, ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X