ಕೊಪ್ಪಳ: ಕನಿಷ್ಠ ವೇತನಕ್ಕಾಗಿ ಆಗ್ರಹಿಸಿ ಧರಣಿ; ಹೊರಗುತ್ತಿಗೆ ನೌಕರರ ಬಂಧನ

ಕೊಪ್ಪಳ : ಕನಿಷ್ಠ ವೇತನಕ್ಕಾಗಿ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಹೊರಗುತ್ತಿಗೆ ನೌಕರರನ್ನು ಪೊಲೀಸರು ಬಂಧಿಸಿದ್ದಾರೆ.
ಖಾಸಗಿ ಏಜೆನ್ಸಿಗೆ ನೀಡಿದ ಟೆಂಡರ್ ರದ್ದು ಮಾಡಿ, ನೇರವಾಗಿ ಇಲಾಖೆಯಿಂದ ವೇತನ ನೀಡಲು ಆಗ್ರಹಿಸಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರು ಧರಣಿ ಕುಳಿತಿದ್ದ ಪ್ರತಿಭಟನಾ ನಿರತರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.
ಸಿಬ್ಬಂದಿಗಳ ಸಂಖ್ಯೆ ಕಡಿತ ಮಾಡುವಂತೆ ನೀಡಿದ್ದ ಆದೇಶ ರದ್ದು ಆಗ್ರಹಿಸಿ ಸತತ ಎರಡು ದಿನಗಳಿಂದ ಹೋರಾಟ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಲು ಪಟ್ಟು ಹಿಡಿದಿದ್ದರು.
Next Story