ಕೊಪ್ಪಳ | ಚಾಕುವಿನಿಂದ ಇರಿದು ಪತ್ನಿಯ ಹತ್ಯೆ; ಪತಿಯ ಬಂಧನ
ಸಾಂದರ್ಭಿಕ ಚಿತ್ರ
ಕೊಪ್ಪಳ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಪತಿಯೊಬ್ಬ ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ.
ತುರುವೇಕೆರೆ ಮೂಲದ ರಾಜೇಶ್ ಎಂಬಾತನಿಂದ ಕೃತ್ಯ ನಡೆದಿದ್ದು, ಪತಿ-ಪತ್ನಿ ಇಬ್ಬರೂ ಜಾತ್ರೆಗೆ ವ್ಯಾಪಾರಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ. ಕೊಪ್ಪಳದ ಜಾತ್ರಾ ನಿಮಿತ್ಯ ಹಾಕಲಾಗಿರುವ ಆಟದ ಮೈದಾನದಲ್ಲಿ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಪತ್ನಿ ಗೀತಾ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿ ರಾಜೇಶ್ ನಗರ ಠಾಣೆಯ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
Next Story