ಕೊಪ್ಪಳ | ಸೌಜನ್ಯ ಕೊಲೆ ಪ್ರಕರಣ : ಉನ್ನತ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಕೊಪ್ಪಳ: ವಿದ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಮತ್ತು ನೈಜ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕೊಪ್ಪಳದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಪ್ರಗತಿಪರ ಹೋರಾಟಗಾರ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಕರಣವನ್ನು ತನಿಖೆಗೆ ಆದೇಶಿಸಿ, ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹೋರಾಟಗಾರರಾದ ಎಂ.ಬಿ ಗೋನಾಳ, ಬಸವರಾಜ ಶೀಲವಂತರ್, ಪರಶುರಾಮ್ ಕೆರೆಹಳ್ಳಿ,ಪುಷ್ಪ ಮೇಸ್ತ್ರಿ,ಮತ್ತು ಗಾಳೆಪ್ಪ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
Next Story