ಸಂಗಣ್ಣ ಕರಡಿಗೆ ಟಿಕೆಟ್ ತಪ್ಪಿದೆ ಎನ್ನುವ ಕಾರಣ ಬೇಕಿದೆ: ರವಿಕುಮಾರ್
ಕೊಪ್ಪಳ: ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರಿಗೆ ಯಾವ ಕಾರಣಕ್ಕೆ ಟಿಕೆಟ್ ತಪ್ಪಿದೆ ಎನ್ನುವ ಕಾರಣ ಬೇಕಿದೆ ಎಂದು ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಸಂಗಣ್ಣ ಕರಡಿ ಅವರೊಂದಿಗೆ ಮಾತನಾಡಿದ್ದೇನೆ. ಸಮಸ್ಯೆ ಬಗೆಹರಿಯಲಿದೆ. ಇನ್ನೆರಡು ದಿನದಲ್ಲಿ ಪಕ್ಷದ ಅಭ್ಯರ್ಥಿ ಪರ ಅವರು ಪ್ರಚಾರಕ್ಕೆ ಬರಲಿದ್ದಾರೆ ಎಂದು ಹೇಳಿದರು.
ಪಕ್ಷ ಎಂದ ಮೇಲೆ ಸಣ್ಣಪುಟ್ಟ ಗೊಂದಲ ಸಾಮಾನ್ಯ. ಸಂಗಣ್ಣ ಕರಡಿ ಅವರಿಗೆ ಯಾವ ಕಾರಣಕ್ಕೆ ಟಿಕೆಟ್ ತಪ್ಪಿದೆ ಎನ್ನುವ ಕಾರಣ ಬೇಕಿದೆ. ಅವರು ಒಳ್ಳೆಯ ಕೆಲಸಗಾರರು ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ, ಪಕ್ಷದ ತೀರ್ಮಾನವನ್ನು ಗೌರವಿಸಬೇಕಿದೆ. ಹೀಗಾಗಿ ಅವರೊಂದಿಗೆ ಮಾತನಾಡಿದ್ದೇನೆ. ಅವರು ಬೆಂಗಳೂರಿಗೆ ಬರಲು ಒಪ್ಪಿದ್ದು, ವರಿಷ್ಠರೊಂದಿಗೆ ಮಾತುಕತೆ ನಡೆಸಿ, ಸಂಸದರ ಸಮಸ್ಯೆ ಬಹೆಹರಿಸಲಾಗುವುದು ಎಂದು ಅವರು ನುಡಿದರು.
Next Story