ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಟಿ-20 ವಿಶ್ವಕಪ್ ವಿಜೇತ ಭಾರತ ಕ್ರಿಕೆಟ್ ತಂಡ
PC : X \ ANI
ಹೊಸದಿಲ್ಲಿ: ವೆಸ್ಟ್ ಇಂಡೀಸ್ನಿಂದ ಗುರುವಾರ ಸ್ವದೇಶಕ್ಕೆ ಮರಳಿದ ಟಿ-20 ವಿಶ್ವಕಪ್ ವಿಜೇತ ಭಾರತೀಯ ಕ್ರಿಕೆಟ್ ತಂಡವು, ಇಂದು ತಂಡದ ನಾಯಕ ರೋಹಿತ್ ಶರ್ಮ ನೇತೃತ್ವದಲ್ಲಿ ಹೊಸದಿಲ್ಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಆಯೋಜಿಸಲಾಗಿದ್ದ ಉಪಾಹಾರ ಸೇವನೆ ಕೂಟಕ್ಕೆ ತೆರಳಿತು.
ಬೆಳಗ್ಗೆ 11 ಗಂಟೆಗೆ ತಮ್ಮ ನಿವಾಸಕ್ಕೆ ಆಗಮಿಸಿದ ವಿಶ್ವಕಪ್ ವಿಜೇತ ಭಾರತೀಯ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಮೊದಲಿಗೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ತಂಡದ ಸದಸ್ಯರೊಂದಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ವಿಜಯದ ಅಭಿಯಾನವನ್ನು ಭವಿಷ್ಯದ ಕ್ರೀಡಾಕೂಟಗಳಲ್ಲೂ ಮುಂದುವರಿಸುವಂತೆ ಹುರಿದುಂಬಿಸಿದರು ಎಂದು ಹೇಳಲಾಗಿದೆ.
ಇದಕ್ಕೂ ಮುನ್ನ ಬಾರ್ಬಡೋಸ್ನಿಂದ ಸ್ವದೇಶಕ್ಕೆ ಮರಳಿದ ಭಾರತೀಯ ತಂಡಕ್ಕೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ನಂತರ ಐಟಿಸಿ ಮೌರ್ಯ ಹೋಟೆಲ್ಗೆ ತೆರಳಿದ ಭಾರತ ತಂಡದ ಆಟಗಾರರು, ಸಿಬ್ಬಂದಿಗಳು ಹೋಟೆಲ್ನಲ್ಲಿ ವಿಜಯೋತ್ಸವ ಆಚರಿಸಿದರು. ಭಾರತ ತಂಡದ ನಾಯಕ ರೋಹಿತ್ ಶರ್ಮ, ರಾಹುಲ್ ದ್ರಾವಿಡ್ ಹಾಗೂ ವಿರಾಟ್ ಕೊಹ್ಲಿ ಅವರು ಹೋಟೆಲ್ನಲ್ಲಿ ಬಾಣಸಿಗ ತಯಾರಿಸಿದ್ದ ಕೇಕ್ ಕತ್ತರಿಸುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೊದಲ್ಲಿ ಕಂಡು ಬಂದಿದೆ.
#WATCH | Indian Cricket team meets Prime Minister Narendra Modi at 7, Lok Kalyan Marg.
— ANI (@ANI) July 4, 2024
Team India arrived at Delhi airport today morning after winning the T20 World Cup in Barbados on 29th June. pic.twitter.com/840otjWkic
ನಂತರ, ಅವರೆಲ್ಲ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ ನಿವಾಸಕ್ಕೆ ಉಪಾಹಾರ ಸೇವನೆಗೆಂದು ತೆರಳಿದರು.