Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. Lead news
  3. ಹಿರಿಯ ತಮಿಳು ನಟ, ಡಿಎಂಡಿಕೆ ನಾಯಕ...

ಹಿರಿಯ ತಮಿಳು ನಟ, ಡಿಎಂಡಿಕೆ ನಾಯಕ ವಿಜಯಕಾಂತ್ ನಿಧನ

ವಾರ್ತಾಭಾರತಿವಾರ್ತಾಭಾರತಿ28 Dec 2023 9:44 AM IST
share
ಹಿರಿಯ ತಮಿಳು ನಟ, ಡಿಎಂಡಿಕೆ ನಾಯಕ ವಿಜಯಕಾಂತ್ ನಿಧನ

ಚೆನ್ನೈ: ಡಿಎಂಡಿಕೆ ಸ್ಥಾಪಕ ಹಾಗೂ ಹಿರಿಯ ನಟ ವಿಜಯಕಾಂತ್‌ ಅವರು ಚೆನ್ನೈನ ಆಸ್ಪತ್ರೆಯೊಂದರಲ್ಲಿ ಗುರುವಾರ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರಿಗೆ ಕೋವಿಡ್‌ ದೃಢಪಟ್ಟಿತ್ತೆಂದು ತಿಳಿದು ಬಂದಿದೆ.

ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಆಸ್ಪತ್ರೆಯಲ್ಲಿ ವೆಂಟಿಲೇಟರಿನಲ್ಲಿರಿಸಲಾಗಿದೆ ಎಂದು ಅವರ ಪಕ್ಷ ಈ ಹಿಂದೆ ಟ್ವೀಟ್‌ ಮೂಲಕ ಮಾಹಿತಿ ನೀಡಿತ್ತು. ನವೆಂಬರ್‌ ತಿಂಗಳಿನಲ್ಲೂ ಅವರನ್ನು ಚೆನ್ನೈನ ಎಂಐಒಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆಗ ಅವರು ಕೆಮ್ಮು ಮತ್ತು ಗಂಟಲು ನೋವಿನಿಂದ ಬಳಲುತ್ತಿದ್ದರು. ಆ ಸಂದರ್ಭ 14 ದಿನಗಳ ಕಾಲ ಅವರು ವೈದ್ಯರ ನಿಗಾದಲ್ಲಿದ್ದರು.

ಕ್ಯಾಪ್ಟನ್‌ ಎಂದೇ ಜನಪ್ರಿಯರಾಗಿರುವ ವಿಜಯಕಾಂತ್‌ ಅವರು 154 ತಮಿಳು ಚಲನಚಿತ್ರಗಳಲ್ಲಿ ನಟಿಸಿದ್ದರು ಹಾಗೂ ಮುಂದೆ ರಾಜಕೀಯಕ್ಕೆ ಧುಮುಕಿದ್ದರು.

ದಕ್ಷಿಣ ಭಾರತೀಯ ಕಲಾವಿದರ ಸಂಘದಲ್ಲಿ ಸಕ್ರಿಯರಾಗಿದ್ದ ವಿಜಯಕಾಂತ್‌ ಅವರು 2005ರಲ್ಲಿ ದೇಸೀಯ ಮುರ್ಪೊಕ್ಕು ದ್ರಾವಿಡ ಕಝಗಂ ಪಕ್ಷ ಸ್ಥಾಪಿಸಿದ್ದರು, 2006ರಲ್ಲಿ ಅವರ ಪಕ್ಷ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಆದರೆ ಕೇವಲ ಶೇ.10 ಮತಗಳನ್ನು ಪಡೆಯುವಲ್ಲಿ ಸಫಲವಾಗಿತ್ತಲ್ಲದೆ ಪಕ್ಷದ ಪ್ರಮುಖನನ್ನು ಹೊರತುಪಡಿಸಿ ಇತರೆಲ್ಲರೂ ಸೋತಿದ್ದರು.

2011ರಲ್ಲಿ ಎಐಎಡಿಎಂಕೆ ಜೊತೆ ಹೊಂದಾಣಿಕೆಯೊಂದಿಗೆ 41 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 26ರಲ್ಲಿ ಅವರ ಪಕ್ಷ ಜಯ ಸಾಧಿಸಿ ಮುಖ್ಯ ವಿಪಕ್ಷ ಸ್ಥಾನ ಪಡೆಯಿತು. 2011-2016 ಅವಧಿಯಲ್ಲಿ ಅವರು ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕರಾಗಿದ್ದರು. ನಂತರ ಅವರು ಎಐಎಡಿಎಂಕೆಯೊಂದಿಗೆ ಹೊಂದಾಣಿಕೆ ಕಡಿದುಕೊಂಡಿದ್ದರು.

ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು ವಿರುಧಾಚಲಂ ಮತ್ತು ರಿಷಿವಂದಿಯಂ ಕ್ಷೇತ್ರಗಳನ್ನು ಪ್ರತಿನಿಧಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X