ಬಾಗೇಪಲ್ಲಿ: ಕೃಷಿ ಹೊಂಡಕ್ಕೆ ಬಿದ್ದು ಸಹೋದರಿಯರ ಸಾವು
ಸಾಂದರ್ಭಿಕ ಚಿತ್ರ
ಚೇಳೂರು : ಕೃಷಿ ಹೊಂಡದಲ್ಲಿ ಬಿದ್ದು ಸಹೋದರಿಯರು ಮೃತ ಪಟ್ಟಿರುವ ಘಟನೆ ತಾಲೂಕಿನ ಸೋಮನಾಥಪುರ ಗ್ರಾಪಂ ವ್ಯಾಪ್ತಿಯ ಕುರಪ್ಪಲ್ಲಿ ಗ್ರಾಮದಲ್ಲಿ ವರದಿಯಾಗಿದೆ.
ಮೃತ ಸಹೋದರಿಯರನ್ನು ಸಾಹಿತಿ(14), ರಾಧಮ್ಮ (17)ಎಂದು ಗುರುತಿಸಲಾಗಿದೆ. ಇವರಿಬ್ಬರು ಗ್ರಾಮದ ಆದಿನಾರಾಯಣ ರೆಡ್ಡಿ ಎಂಬವರ ಕೃಷಿಹೊಂಡದಲ್ಲಿ ಈಜಲು ಹೋಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಚೇಳೂರು ಹಾಗೂ ಪಾತಪಾಳ್ಯ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಇಬ್ಬರ ಮೃತದೇಹಗಳನ್ನು ಹೊಂಡದಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪಾತಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story