ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ
ವೀರಪ್ಪ ಮೊಯ್ಲಿ
ಚಿಕ್ಕಬಳ್ಳಾಪುರ : ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ನಗರದ ವಾಪಸಂದ್ರದಲ್ಲಿನ ತಮ್ಮ ಗೃಹಕಛೇರಿಯಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಕಾಂಗ್ರೆಸ್ ಟಿಕೆಟ್ ರಕ್ಷಾರಾಮಯ್ಯ ಅವರಿಗೆ ಘೋಷಣೆ ಯಾದ ಬಳಿಕ ಮೊದಲ ಬಾರಿ ಸುದ್ದಿಗೋಷ್ಟಿ ನಡೆಸಿದರು. ಈ ಬಾರಿ ಮೊಯ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಹೈಕಮಾಂಡ್ ಕೊನೆ ಕ್ಷಣದಲ್ಲಿ ರಕ್ಷಾ ರಾಮಯ್ಯ ಅವರಿಗೆ ನೀಡಿದೆ. ಇದರಿಂದ ವೀರಪ್ಪ ಮೊಯ್ಲಿ ಕೊಂಚ ನಿರಾಸೆಯಲ್ಲಿದ್ದರು. ಇದೀಗ ಅಂತಿಮವಾಗಿ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ಘೋಷಣೆ ಮಾಡಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ವೀರಪ್ಪ ಮೊಯ್ಲಿ, " ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭೆಗೆ ಸ್ಪರ್ಧಿಸಲು ನನಗೆ ಟಿಕೆಟ್ ನೀಡಬೇಕೆಂದು ಸ್ಥಳೀಯ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದರು. ಆದರೆ, ಹೈಕಮಾಂಡ್ ಸ್ಪರ್ಧೆಯಿಂದ ಹಿಂದೆ ಸರಿಯಲು ಮನವಿ ಮಾಡಿತ್ತು. ಹೈಕಮಾಂಡ್ಗೆ ಗೌರವ ಕೊಟ್ಟು ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ. ನನ್ನ ಬೆಂಬಲಿಗರು ನಮ್ಮ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲಿಸಬೇಕೆಂದು ಕರೆ ನೀಡಿದರು. ಈ ಮೂಲಕ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ವೀರಪ್ಪ ಮೊಯ್ಲಿ ಪಕ್ಷದ ಅಭ್ಯರ್ಥಿ ರಕ್ಷಾ ರಾಮಯ್ಯಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.