ʼಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲʼ: ಡಿಕೆಶಿ ಹೇಳಿಕೆ ಅಲ್ಲಗಳೆದ ಸಿಎಂ ಸಿದ್ದರಾಮಯ್ಯ
ಮಂಡ್ಯ : ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ಅಧಿಕಾರ ಹಂಚಿಕೆ ಕುರಿತು ಚರ್ಚೆ ಆರಂಭವಾಗಿದ್ದು, ʼನಮ್ಮ ನಡುವೆ ಯಾವ ಒಪ್ಪಂದವೂ ಆಗಿಲ್ಲ. ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುತ್ತೇವೆʼ ಎಂದು ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ʼಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ, ಸಮಯ ಬಂದಾಗ ಅದರ ಬಗ್ಗೆ ಮಾತನಾಡುವೆʼ ಎಂದು ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಡಿ.ಕೆ.ಶಿವಕುಮಾರ್ ಹೇಳಿದ್ದರು.
ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಬಂಡಬೋಯಿನಹಳ್ಳಿಯಲ್ಲಿ ಮಾತನಾಡಿದ ಅವರು ಸಿಎಂ, ʼಹೈಕಮಾಂಡ್ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆ. ನಮ್ಮ ಮಧ್ಯೆ ಯಾವ ಒಪ್ಪಂದವೂ ಆಗಿಲ್ಲʼ ಎಂದರು.
Next Story