ಮನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನ: ಮಂಡ್ಯ ಜಿಲ್ಲೆಗೆ 3 ವಿಭಾಗದಲ್ಲಿ ರಾಜ್ಯ ಪ್ರಶಸ್ತಿ

ಮಂಡ್ಯ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು 2023-24ನೇ ಸಾಲಿನಲ್ಲಿ ಜಿಲ್ಲೆಗೆ ಮೂರು ವಿಭಾಗದಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಬಂದಿವೆ.
ಮೈಸೂರು ವಿಭಾಗದ ಅತ್ಯುತ್ತಮ ಒಗ್ಗೂಡಿಸುವಿಕೆ ಜಿಲ್ಲಾ ಪುರಸ್ಕಾರಕ್ಕೆ ರೇಷ್ಮೆ ಇಲಾಖೆ, ಅತ್ಯುತ್ತಮ ಗ್ರಾಮ ಪಂಚಾಯತ್ ಪುರಸ್ಕಾರಕ್ಕೆ ಮದ್ದೂರು ತಾಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯತ್ ಹಾಗೂ ಮದ್ದೂರು ತಾಲೂಕು ದೊಡ್ಡರಸಿನಕೆರೆ ಗ್ರಾಪಂನ ಲತಾ ಡಿ.ಕೆ. ಅತ್ಯುತ್ತಮ ಕಾಯಕ ಬಂಧು ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ.
ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು.
Next Story