ಮಂಡ್ಯ | ಸೇತುವೆಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು
ಸಾಂದರ್ಭಿಕ ಚಿತ್ರ
ಮಂಡ್ಯ : ಮದ್ದೂರು ತಾಲೂಕು ಮದ್ದೂರು-ಮಳವಳ್ಳಿ ರಸ್ತೆಯ ಚಿಕ್ಕರಸಿನಕೆರೆ ಗೇಟ್ ಬಳಿ ಸೇತುವೆಗೆ ಬೈಕ್ ಢಿಕ್ಕಿಯೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಃಟನೆ ರವಿವಾರ ಮುಂಜಾನೆ ನಡೆದಿರುವುದು ವರದಿಯಾಗಿದೆ.
ಅಪಘಾತದಲ್ಲಿ ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ಅಕ್ಕೂರ್ದೊಡ್ಡಿ ಗ್ರಾಮದ ನಂಜನಾಯಕ್ ಅವರ ಪುತ್ರ ರಾಚನಾಯಕ್(30) ಸಾವನ್ನಪ್ಪಿದ್ದಾರೆ. ಈತ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದ ತಿಳಿದು ಬಂದಿದೆ.
ಮೃತದೇಹವನ್ನು ಕೆ.ಎಂ.ದೊಡ್ಡಿಯ ಸಮುದಾಯ ಆರೋಗ್ಯ ಕೇಂದ್ರದ ಶವಗಾರದಲ್ಲಿ ಪಂಚನಾಮೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story