ಮಂಡ್ಯ | ಹಾಡಹಗಲೇ ಮಹಿಳೆಯ ಕೈಕಾಲು ಕಟ್ಟಿಹಾಕಿ ದರೋಡೆ
ಮಂಡ್ಯ : ಹಾಡಹಗಲೇ ಮನೆಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಮಹಿಳೆಯ ಕೈಕಾಲು ಕಟ್ಟಿಹಾಕಿ, ಬಾಯಿಗೆ ಬಟ್ಟೆ ತುರುಕಿ ಮನೆಯಲ್ಲಿದ್ದ ನಗದು ಮತ್ತು ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಮದ್ದೂರು ತಾಲೂಕು ಮೆಳ್ಳಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿರುವುದು ವರದಿಯಾಗಿದೆ.
ಮೆಳ್ಳಹಳ್ಳಿ ಗ್ರಾಮದ ವೆಂಕಟೇಶ್ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದ್ದು, ವೆಂಕಟೇಶ್ ಅವರ ಪತ್ನಿ ಹರ್ಷಿತಾ ಒಬ್ಬರೇ ಮನೆಯಲ್ಲಿದ್ದಾಗ ಬೆಳಗ್ಗೆ 10 ಗಂಟೆಯ ಸುಮಾರಿನಲ್ಲಿ ಮನೆಗೆ ನುಗ್ಗಿದ ಇಬ್ಬರು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
ತನ್ನ ಬಾಯಿಗೆ ಬಟ್ಟೆ ತುರುಕಿ, ಕೈಕಾಲು ಕಟ್ಟಿಹಾಕಿದ ದುಷ್ಕರ್ಮಿಗಳು ಬೀರುವಿನಲ್ಲಿದ್ದ 1.5 ಲಕ್ಷ ರೂ. ನಗದು ಹಾಗೂ 25 ಗ್ರಾಂ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ಹರ್ಷಿತಾ ದೂರು ನೀಡಿದ್ದು, ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story