ನಾಗಮಂಗಲ ಗಲಭೆ ಪ್ರಕರಣ | ಎಲ್ಲ ಆರೋಪಿಗಳಿಗೆ ಜಾಮೀನು ಮಂಜೂರು
ಮಂಡ್ಯ : ನಾಗಮಂಗಲ ಪಟ್ಟಣದಲ್ಲಿ ಗಣೇಶಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ್ದ ಗಲಭೆ ಪ್ರಕರಣದ ಎಲ್ಲ ಆರೋಪಿಗಳಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.
ನಾಗಮಂಗಲ ಪಟ್ಟಣದಲ್ಲಿ ಪುರಸಭೆ ವ್ಯಾಪ್ತಿಯ ಬದ್ರಿಕೊಪ್ಪಲು ಗ್ರಾಮದ ಯುವಕರು ಸೆ.11ರಂದು ಗಣಪತಿ ವಿಸರ್ಜನೆ ಸಂಬಂಧ ಮೆರವಣಿಗೆ ನಡೆಸುತ್ತಿದ್ದಾಗ ಗಲಭೆ ಉಂಟಾಗಿ ಅಂಗಡಿ, ವಾಹನಗಳಿಗೆ ಬೆಂಕಿಹಚ್ಚಲಾಗಿತ್ತು.
ಪ್ರಕರಣ ಸಂಬಂಧ ಪೊಲೀಸರು ಒಟ್ಟು 37 ಮಂದಿಯನ್ನು ಬಂಧಿಸಿದ್ದರು. ಬಳಿಕ ನಾಗಮಂಗಲದ ಜೆಎಂಎಫ್‍ಸಿ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಜೈಲಿಗೆ ಕಳುಹಿಸಿತ್ತು.
ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದು, ಆರೋಪಿಗಳು ಇನ್ನೂ ಜಿಲ್ಲಾ ಕಾರಾಗೃಹದಲ್ಲಿದ್ದಾರೆ. 11 ಲಕ್ಷ ಮೌಲ್ಯದ ಬಾಂಡ್ ಹಾಗೂ ಡಬಲ್ ಶೂರಿಟ ನೀಡಿದ ನಂತರ ಕಾರಾಗೃಹದಿಂದ ಬಿಡುಗಡೆ ಆಗುತ್ತಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Next Story