ಮೈಸೂರು ದಸರಾ | ಮಂಡ್ಯ ಜಿಲ್ಲಾ ಸ್ತಬ್ಧ ಚಿತ್ರಕ್ಕೆ ಪ್ರಥಮ ಸ್ಥಾನ
ಮಂಡ್ಯ : ನಾಡಹಬ್ಬ ಮೈಸೂರು ದಸರಾ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಮಂಡ್ಯ ಜಿಲ್ಲೆ ಸಾದರಪಡಿಸಿದ ರಂಗನತಿಟ್ಟು ಪಕ್ಷಿಧಾಮ ಹಾಗೂ ಕೃಷ್ಣರಾಜಸಾಗರ ಆಣೆಕಟ್ಟು ಸ್ತಬ್ಧಚಿತ್ರ ಪ್ರಥಮ ಸ್ಥಾನ ಪಡೆದಿದೆ.
ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯ ಹಿರಿಮೆ ಮತ್ತು ಪ್ರತಿಷ್ಠೆಯಾದ ವಿಶ್ವವಿಖ್ಯಾತ ಕೆಆರ್‌ಎಸ್ ಜಲಾಶಯ ಹಾಗೂ ರಂಗನತಿಟ್ಟು ಪಕ್ಷಿಧಾಮದ ಪ್ರತಿರೂಪ ಮಾದರಿಯನ್ನು ಈ ಬಾರಿಯ ಮೈಸೂರು ದಸರಾ ಮೆರವಣಿಗೆಯಲ್ಲಿ ಪ್ರದರ್ಶನ ಮಾಡಲಾಗಿತ್ತು.
ಕರ್ನಾಟಕದ ಪಕ್ಷಿಕಾಶಿ ಎಂದೇ ಹೆಸರುವಾಸಿಯಾಗಿರುವ ರಂಗನತಿಟ್ಟು ಪಕ್ಷಿಧಾಮ ಸ್ತಬ್ಧ ಚಿತ್ರ ಎಲ್ಲರ ಗಮನ ಸೆಳೆದಿತ್ತು.
Next Story