ಮಂಗಳೂರು: ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ನಿಭಾಯಿಸುವ ಅಣುಕು ಕಾರ್ಯಾಚರಣೆ
ಮಂಗಳೂರು : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಹುಸಿಬಾಂಬ್ ಬೆದರಿಕೆ ಕರೆಯ ಬೆನ್ನಲ್ಲೇ ಶುಕ್ರವಾರ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ನಿಭಾಯಿಸುವ ಕುರಿತು ಅಣುಕು ಕಾರ್ಯಾಚರಣೆ ನಡೆಯಿತು.
ವಿಮಾನ ನಿಲ್ದಾಣದ ಭದ್ರತಾ ಪ್ರತಿಕ್ರಿಯೆ ವ್ಯವಸ್ಥೆಯನ್ನು ಪರೀಕ್ಷಿಸಲು ಮತ್ತು ಬಿಕ್ಕಟ್ಟಿನ ಸಮಯದಲ್ಲಿ ವಿವಿಧ ಮಧ್ಯಸ್ಥಗಾರರು ಮತ್ತು ಏಜೆನ್ಸಿಗಳೊಂದಿಗೆ ಸಮನ್ವಯ ಸಾಧಿಸುವ ಕೌಶಲ ಪರೀಕ್ಷಿಸಲು ವಿಮಾನ ನಿಲ್ದಾಣದ ಸಿಬ್ಬಂದಿ ಪಾರ್ಕಿಂಗ್ ಸ್ಥಳದಲ್ಲಿ ಈ ಅಭ್ಯಾಸವನ್ನು ನಡೆಸಿದರು.
ಮಧ್ಯಾಹ್ನ 1 ಗಂಟೆಗೆ ಆರಂಭಗೊಂಡ ಡ್ರಿಲ್ 2ಕ್ಕೆ ಪೂರ್ಣಗೊಂಡಿತು. ವಿಮಾನ ನಿಲ್ದಾಣದ ಭದ್ರತೆಯನ್ನು ನಿರ್ವಹಿಸುವ ಸಿಐಎಸ್‌ಎಫ್ ವಿಮಾನ ನಿಲ್ದಾಣ ಭದ್ರತಾ ಗುಂಪು (ಎಎಸ್‌ಜಿ) ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.
Next Story