ಸೂರಜ್ ರೇವಣ್ಣ ವಿರುದ್ಧ ಕ್ರಮಕ್ಕೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನ : ಜಿ.ಟಿ.ದೇವೇಗೌಡ
ಮೈಸೂರು : ಲೈಂಗಿಕ ದೌರ್ಜನ್ಯದ ಆರೋಪದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಕ್ರಮ ಜರುಗಿಸುವ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದರು.
ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,"ಪ್ರಕರಣದ ಬಗ್ಗೆ ನನಗೆ ಮಾಹಿತಿ ಇಲ್ಲ. ಸೂರಜ್ ಅವರನ್ನು ಬಂಧಿಸಿರುವ ವಿಷಯವೂ ಮಾಧ್ಯಮದಿಂದಲೇ ತಿಳಿಯಿತು. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಚಾರದಲ್ಲೂ ನಮ್ಮ ಪಕ್ಷದ ಹಸ್ತಕ್ಷೇಪ ಇರಲಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ" ಎಂದರು.
ʼನಾವು ತಪ್ಪು ಮಾಡಿದವರ ಪರ ನಿಲ್ಲುವುದಿಲ್ಲ. ನನ್ನ ಮಗನೇ ಇರಲಿ, ನನ್ನ ಸಂಬಂಧಿಗಳೇ ಇರಲಿ, ಯಾರೇ ತಪ್ಪು ಮಾಡಿದರೂ ತಪ್ಪೇ. ಜಾತ್ಯತೀತ ಜನತದಾಳ ಪಕ್ಷವು ತಪ್ಪು ಮಾಡಿದವರ ಪರವಾಗಿ ಎಂದಿಗೂ ನಿಲ್ಲುವುದಿಲ್ಲʼ ಎಂದು ಹೇಳಿದರು.
Next Story