ಚೆಕ್ ಬೌನ್ಸ್ ಪ್ರಕರಣ: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ 6 ತಿಂಗಳ ಜೈಲು ಶಿಕ್ಷೆ

ಮೈಸೂರು,ಜ.30: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿ ಸಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಹೆಚ್ವುವರಿ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಾಲಯ ಆದೇಶ ಹೊರಡಿಸಿದೆ.
ಲಲಿತಾದ್ರಿಪುರದ ಕುಮಾರ್ ಎಂಬವರಿಂದ 2015 ರಲ್ಲಿ ಸಾಲವಾಗಿ ಹಣ ಪಡೆದಿದ್ದರು. ಇದಕ್ಕೆ ಪ್ರತಿಯಾಗಿ ಮರ್ಚೆಂಟ್ ಕೋ ಆಪರೇಟಿವ್ ಬ್ಯಾಂಕ್ ಚೆಕ್ ನೀಡಿದ್ದರು. ಕುಮಾರ್ ಅವರು ತಮ್ಮ ಬ್ಯಾಂಕ್ ಖಾತೆ ಮೂಲಕ ಚೆಕ್ ಹಾಕಿದ್ದರು. ಆಗ ಚೆಕ್ ಬೌನ್ಸ್ ಆಗಿತ್ತು. ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚೆಕ್ ಬೌನ್ಸ್ ಗೆ ಸಂಬಂಧ ಪಟ್ಟಂತೆ ಹಣ ಹಿಂದಿರುಗಿಸಬೇಕು ಅಥವಾ ಆರು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪುನೀಡಿ ಆದೇಶ ಪ್ರಕಟಿಸಿದೆ.
ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸ್ನೇಹಮಯಿ ಕೃಷ್ಣ ಈ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
Next Story