ಸಂಸದ ಶ್ರೀನಿವಾಸ್ ಪ್ರಸಾದ್ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ...
ಮೈಸೂರು, ಎ.13: ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಭೇಟಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ವಿ.ಶ್ರೀನಿವಾಸ್ ಪ್ರಸಾದ್ ದೀರ್ಘ ಕಾಲದ ಸ್ನೇಹಿತರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ಬಿಜೆಪಿಗೆ ಹೊದರು. ನಾನು ಕಾಂಗ್ರೆಸ್ ಪಕ್ಷದಲ್ಲೇ ಉಳಿದುಕೊಂಡೆ. ಈಗ ಅವರು ರಾಜಕೀಯ ನಿವೃತ್ತಿ ಪಡೆದಿದ್ದಾರೆ. ಅವರ ರಾಜಕೀಯ ನಿವೃತ್ತಿ ನಂತರ ನಾನು ಆವರನ್ನು ಭೇಟಿ ಮಾಡಲು ಆಗಿರಲಿಲ್ಲ. ಹಾಗಾಗಿ ಇಂದು ಭೇಟಿ ಮಾಡಿ ಆವರ ಆರೋಗ್ಯ ವಿಚಾರಿಸಿದ್ದೇನೆ ಎಂದು ಹೇಳಿದರು.
ರಾಜಕಾರಣದ ಬಗ್ಗೆ ಚರ್ಚೆ ಮಾಡಲಿಲ್ಲ. ಈಗಾಗಲೇ ಅವರು ಯಾವ ಪಕ್ಷಕ್ಕೂ ತಾನು ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದಾರೆ. ಹಾಗಿದ್ದ ಮೇಲೆ ರಾಜಕೀಯ ಹೇಗೆ ಚರ್ಚೆ ಮಾಡಲು ಸಾಧ್ಯ? ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇನೆ. ಕಾಂಗ್ರೆಸ್ ಪಕ್ಷದ ಬಗ್ಗೆ ಸಿಂಪತಿ ಇರಲಿ ಎಂದಷ್ಟೇ ಅವರಿಗೆ ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
Next Story