ಮೈಸೂರು | ವಿಶ್ವವಿಖ್ಯಾತ ಜಂಬೂ ಸವಾರಿಗೆ ಕ್ಷಣಗಣನೆ : ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರ ಆಗಮನ
ಜಂಬೂ ಸವಾರಿ(file photo)
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಜಂಬೂ ಸವಾರಿ ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ಮೈಸೂರು ನಗರಕ್ಕೆ ಆಗಮಿಸುತ್ತಿದ್ದಾರೆ.
ಮಧ್ಯಾಹ್ನ 1.41 ರಿಂದ 2.10 ರೊಳಗಿನ ಸಮಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಂದಿ ಕಂಬಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಸಂಜೆ 4 ರಿಂದ 4.30ರವರೆಗೆ ಸಲ್ಲುವ ಕುಂಭ ಲಗ್ನದಲ್ಲಿ ಜಂಬೂ ಸವಾರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.
750 ಕೆ.ಜಿ.ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ಚಾಮುಂಡೇಶ್ವರಿ ತಾಯಿಯನ್ನು ಹೊತ್ತು ಗಜರಾಜ ಅಭಿಮನ್ಯು ಬೀದಿಗಳಲ್ಲಿ ಹೆಜ್ಜೆ ಹಾಕಲಿದ್ದಾನೆ.
ಜಂಬೂ ಸವಾರಿ ವೀಕ್ಷಣೆಗೆ ಅರಮನೆ ಒಳಗೆ 40 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. ಅರಮನೆ ಒಳಗಿಂದ ಜಂಬೂ ಸವಾರಿ ಸಾಗಿ ಸಂಜೆ ವೇಳೆಗೆ ಬನ್ನಿಮಂಟಪ ತಲುಪಲಿದೆ. ಈ ಬಾರಿ ಅದ್ದೂರಿ ದಸರಾ ಆಚರಣೆ ಮಾಡುತ್ತಿರುವುದರಿಂದ ನಾಡಿನ ವಿವಿದೆಡೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಿದ್ದು, ಭಾರೀ ಜನ ಸೇರುವ ಸಾಧ್ಯತೆ ಇದೆ.