ದೆಹಲಿ ರೈತರ ಹೋರಾಟ ಬೆಂಬಲಿಸಿ ಟ್ರ್ಯಾಕ್ಟರ್ ರ್‍ಯಾಲಿ ನಡೆಸಿದ ರೈತರು
ದೇಶಾದ್ಯಂತ ಗಣರಾಜ್ಯೋತ್ಸವ ಆಚರಿಸುತ್ತಿದ್ದರು ರೈತರಿಗೆ ಸ್ವಾತಂತ್ರ್ಯವೇ ಸಿಕ್ಕಿಲ್ಲ: ಕುರುಬೂರು ಶಾಂತಕುಮಾರ್

ಮೈಸೂರು : ದೆಹಲಿ ಗಡಿಯಲ್ಲಿ ಕೃಷಿ ಉತ್ಪನ್ನಗಳಿಗೆ ಎಂ.ಎಸ್.ಪಿ ಗ್ಯಾರಂಟಿ ಕಾನೂನು ಜಾರಿಗಾಗಿ ಹೋರಾಡುತ್ತಿರುವ ಜಗತ್ ಸಿಂಗ್ ದಲೈವಾಲಾ ಅವರ 62 ದಿನದ ಉಪವಾಸ ಬೆಂಬಲಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತರು ಟ್ರ್ಯಾಕ್ಟರ್ ರ್‍ಯಾಲಿ ನಡೆಸಿದರು.
ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಎಪಿಎಂಸಿ ಬಳಿಯ ರಿಂಗ್ ರಸ್ತೆ ಬಳಿ ರವಿವಾರ ಟ್ರ್ಯಾಕ್ಟರ್ ಗಳೊಂದಿಗೆ ಜಮಾಯಿಸಿದ ರೈತರು ಅಲ್ಲಿಂದ ಟ್ರ್ಯಾಕ್ಟರ್ ಮೂಲಕ ಹೊರಟು ನಂಜನಗೂಡು ರಾಷ್ಟ್ರೀಯ ಹೆದ್ದಾರಿ ಕಡಕೋಳ ಬಳಿ ಇರುವ ಟೋಲ್ ತನಕ ಟ್ರ್ಯಾಕ್ಟರ್ ರ್‍ಯಾಲಿ ನಡೆಸಿ ಅರ್ಧ ಗಂಟೆ ಕಾಲ ಟೋಲ್ ಬಂದ್ ಮಾಡಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಇದೇ ವೇಳೆ ಸಂಯುಕ್ತ ಕಿಸಾನ್ ಮೋರ್ಚ(ರಾಜಕೀಯೆತರ) ದಕ್ಷಿಣ ಭಾರತ ಸಂಚಾಲಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ.ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ದೇಶಾದ್ಯಂತ ಇಂದು ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ ಆದರೆ ರೈತರಿಗೆ ಸ್ವಾತಂತ್ರ್ಯವೇ ಸಿಕ್ಕಿಲ್ಲ. ದೇಶದ ರೈತರ ಒಳಿತಿಗಾಗಿ 62 ದಿನಗಳಿಂದ ಉಪವಾಸ ನಡೆಸುತ್ತಿರುವ ಸರ್ದಾರ್ ದಲೈವಾಲಾ ರವರು. ಕೇಂದ್ರ ಸರ್ಕಾರ ಹಾಗೂ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರ ಮನವಿ ಮೇರೆಗೆ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಚಳುವಳಿಯನ್ನು ಕೈಬಿಟ್ಟಿಲ್ಲ ರೈತರ ಬೇಡಿಕೆ ಈಡೆರುವ ತನಕ ಹೋರಾಟ ಮುಂದುವರಿಸಲು ತೀರ್ಮಾನಿಸಲಾಗಿದೆ.
ಈ ಹಿನ್ನಲೆಯಲ್ಲಿ ದೇಶಾದ್ಯಂತ ಇಂದು ಜಿಲ್ಲಾ ತಾಲೂಕು ಕೇಂದ್ರಗಳಲ್ಲಿ ಟ್ಯಾಕ್ಟರ್ ರ್‍ಯಾಲಿಲಿ ನಡೆಸಲಾಗಿದೆ. ಮೈಸೂರು, ಚಾಮರಾಜನಗರ, ಶಿವಮೊಗ್ಗ, ಧಾರವಾಡ, ಬೆಳಗಾವಿ, ಗುಲ್ಬರ್ಗ, ರಾಯಚೂರು, ಹಾಸನ ಮತ್ತಿತರ ಜಿಲ್ಲೆಗಳಲ್ಲಿ ರ್‍ಯಾಲಿಲಿ ನಡೆಸಲಾಗುತ್ತಿದೆ ಎಂದರು.
ಫೆಬ್ರವರಿ ಎರಡನೇ ವಾರದಲ್ಲಿ ಕರ್ನಾಟಕದ ರೈತರ ತಂಡ ದೆಹಲಿ ಗಡಿ ಚಳುವಳಿಗೆ ಹೋಗುತ್ತಿದೆ ಎಂದು ಹೇಳಿದರು.
ಪ್ರತಿಭಟನಾ ರ‍್ಯಾಲಿಯಲ್ಲಿ ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ್, ಪಿ ಸೋಮಶೇಖರ್, ಕಿರಗಸೂರು ಶಂಕರ್, ನೀಲಕಂಠಪ್ಪ, ವಿಜಯೇಂದ್ರ, ಸಿದ್ದೇಶ್, ವೆಂಕಟೇಶ್, ರಾಜೇಶ್, ಪ್ರಭುಸ್ವಾಮಿ, ಮಂಜುನಾಥ್, ಗಿರೀಶ್, ಕೆಂಡಗಣಸ್ವಾಮಿ, ಸ್ವಾಮಿ ಪ್ರಸಾದ್ ನಾಯ್ಕ್, ಪ್ರದೀಪ್ ಗೌರಿಶಂಕರ್, ಗುರುಸ್ವಾಮಿ, ಕೆಂಡಗಂಣಪ್ಪ, ಸುನಿಲ್, ಕಮಲಮ್ಮ, ಕೂಡನಹಳ್ಳಿ ಸೋಮಣ್ಣ, ನಾಗೇಶ್, ಸೂರಿ, ಅರುಣ್, ಲಿಂಗಣ್ಣ, ಕಾರ್ಟೂರ್ ಮಾದೇವಸ್ವಾಮಿ, ನಾಗೇಶ, ಮಾರ್ವಳ್ಳಿ ಬಸವರಾಜ್, ಚುಂಚರಾಯನಹುಂಡಿ ಬಸವರಾಜಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.