ಹುಣಸೂರು | ಕಲ್ಲಿನಿಂದ ಜಜ್ಜಿ ವೃದ್ಧ ದಂಪತಿಯ ಬರ್ಬರ ಹತ್ಯೆ

ಮೃತ ದಂಪತಿ
ಹುಣಸೂರು : ಕಲ್ಲಿನಿಂದ ಜಜ್ಜಿ ವೃದ್ಧ ದಂಪತಿಯನ್ನು ಹತ್ಯೆ ಮಾಡಿರುವ ಘಟನೆ ತಾಲೂಕಿನ ನಾಡಪ್ಪನಹಳ್ಳಿಯಲ್ಲಿ ಸೋಮವಾರ ಸಂಜೆ ನಡೆದಿರುವುದು ವರದಿಯಾಗಿದೆ.
ಕೊಲೆಯಾದ ದಂಪತಿಯನ್ನು ಬಿಳಿಕೆರೆ ಹೋಬಳಿಯ ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ(65), ಇವರ ಪತ್ನಿ ಶಾಂತಮ್ಮ (52)ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ಡಾ.ಬೋರಲಿಂಗಯ್ಯ, ಎಸ್ಪಿ ವಿಷ್ಣುವರ್ಧನ್, ಡಿವೈಎಸ್ಪಿ ಗೋಪಾಲಕೃಷ್ಣ,ಸಬ್ ಇನ್ಸ್ಪೆಕ್ಟರ್ ಲೋಲಾಕ್ಷಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೈಸೂರಿನಿಂದ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
Next Story