ಮೈಸೂರು: ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ
ಸಾಂದರ್ಭಿಕ ಚಿತ್ರ
ಮೈಸೂರು: ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ನಡೆದಿದೆ.
ಅರ್ಬಾಜ್ ಖಾನ್ (18) ಮೃತ ಯುವಕ. ಶಾದಿಲ್, ಶಹಬಾಜ್, ಶೋಯಬ್ ಹಾಗೂ ಸಾಹಿಲ್ ಕೃತ್ಯವೆಸಗಿದ ಆರೋಪಿಗಳು.
ಪರಸ್ಪರ ಗಲಾಟೆಯಲ್ಲಿ ಆರೋಪಿ ಶಹಬಾಜ್ ಕೂಡಾ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಅರ್ಬಾಜ್ ಖಾನ್ ಗುರಾಯಿಸಿ ನೋಡಿದ್ದಾನೆ ಎಂಬ ವಿಚಾರದಲ್ಲಿ ಗಲಾಟೆ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿದೆ.
ಈ ಸಂಭಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story