ಮುಡಾ ಪ್ರಕರಣ | ನ.6ರಂದು ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ಪೊಲೀಸರಿಂದ ಸಿಎಂ ಗೆ ಸಮನ್ಸ್
ಸಿದ್ಧರಾಮಯ್ಯ ( Photo: PTI)
ಮೈಸೂರು: ಮುಡಾದಲ್ಲಿ ಅಕ್ರಮವಾಗಿ ನಿವೇಶನ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ನ.6 ರಂದು ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ನ.6 ಬುಧವಾರ ಬೆಳಿಗ್ಗೆ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಮುಡಾ 50:50 ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೊದಲ ಆರೋಪಿ ಎಂದು ಅಪಾದಿಸಲಾಗಿದ್ದು. ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನಸ್ವಾಮಿ, ಜಮೀನು ಮಾಲೀಕ ದೇವರಾಜು ಅವರ ವಿಚಾರಣೆಯನ್ನು ಈಗಾಗಲೇ ಲೋಕಾಯುಕ್ತ ಪೊಲೀಸರು ನಡೆಸಿದ್ದಾರೆ.
ಜನಪ್ರತಿನಿಧಿಗಳ ನ್ಯಾಯಾಲಯದ ಸೂಚನೆಯಂತೆ ನಾಲ್ವರ ವಿರುದ್ಧ ಎಫ್.ಐ.ಆರ್ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿ ಡಿಸೆಂಬರ್ ಅಂತ್ಯಕ್ಕೆ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಬೇಕಿದೆ.
Next Story